Home ದಾವಣಗೆರೆ ಗ್ರಾಮೀಣ ಭಾಗಗಳಲ್ಲಿ ಹೃದ್ರೋಗ ಸೇರಿದಂತೆ ಜೀವನಶೈಲಿ ಕಾಯಿಲೆಗಳು ಹೆಚ್ಚುತ್ತಿರುವುದು ಆತಂಕಕಾರಿ: ಡಾ. ಟಿ. ಜಿ. ರವಿಕುಮಾರ್
ದಾವಣಗೆರೆ

ಗ್ರಾಮೀಣ ಭಾಗಗಳಲ್ಲಿ ಹೃದ್ರೋಗ ಸೇರಿದಂತೆ ಜೀವನಶೈಲಿ ಕಾಯಿಲೆಗಳು ಹೆಚ್ಚುತ್ತಿರುವುದು ಆತಂಕಕಾರಿ: ಡಾ. ಟಿ. ಜಿ. ರವಿಕುಮಾರ್

Share
ಗ್ರಾಮೀಣ
Share

ದಾವಣಗೆರೆ: ನಲ್ಕುಂದ ಗ್ರಾಮದಲ್ಲಿ ಸಂತೋಷ್ ಕುಮಾರ್ ಅವರ ಸಹಕಾರದೊಂದಿಗೆ ಪ್ರೀತಿ ಆರೈಕೆ ಟ್ರಸ್ಟ್ ಹಾಗೂ ಆರೈಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ದಾವಣಗೆರೆಯ ಆರೈಕೆ ಆಸ್ಪತ್ರೆ ಮುಖ್ಯಸ್ಥರಾದ  ಡಾ. ಟಿ. ಜಿ. ರವಿಕುಮಾರ್  ಅವರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿಯೂ ಸಕ್ಕರೆ ಕಾಯಿಲೆ, ರಕ್ತದೊತ್ತಡ, ಹೃದ್ರೋಗ ಹಾಗೂ ಹೃದಯಾಘಾತದಂತಹ ಕಾಯಿಲೆಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದರು.

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now

ಗ್ರಾಮೀಣ ಭಾಗದ ಜನರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ, ಯಾವುದೇ ಲಕ್ಷಣಗಳು ಕಾಣಿಸಿಕೊಳ್ಳುವ ಮುನ್ನವೇ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಆರಂಭಿಕ ಹಂತದಲ್ಲೇ ಕಾಯಿಲೆಗಳನ್ನು ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆದರೆ ಗಂಭೀರ ಆರೋಗ್ಯ ಸಮಸ್ಯೆಗಳನ್ನು ತಪ್ಪಿಸಿಕೊಳ್ಳಬಹುದು ಎಂದು ಅವರು ತಿಳಿಸಿದರು.

ಈ ಉಚಿತ ಆರೋಗ್ಯ ಶಿಬಿರದಲ್ಲಿ ವಿವಿಧ ಕಾಯಿಲೆಗಳ ತಪಾಸಣೆ, ತಜ್ಞ ವೈದ್ಯರ ಸಲಹೆ ಹಾಗೂ ಅಗತ್ಯ ಚಿಕಿತ್ಸಾ ಸೇವೆಗಳನ್ನು ಒದಗಿಸಲಾಗುತ್ತಿದೆ. ಆರೋಗ್ಯವಂತರೂ ಸಹ ಮುನ್ನೆಚ್ಚರಿಕೆಯ ಕ್ರಮವಾಗಿ ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಭವಿಷ್ಯದಲ್ಲಿ ಉಂಟಾಗಬಹುದಾದ ತೀವ್ರ ಆರೋಗ್ಯ ಸಮಸ್ಯೆಗಳನ್ನು ತಡೆಯಲು ಸಾಧ್ಯ ಎಂದು ಅವರು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಲ್ಕುಂದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕಿರಣ್ ಅವರು ವಹಿಸಿದ್ದರು. ಗ್ರಾಮದ ಮುಖಂಡರಾದ ಸಂತೋಷ್ ಕುಮಾರ್, ಓಂಕಾರಪ್ಪ ಮತ್ತು ಅಣಬೇರು ನಂದಕುಮಾರ್ ಹಾಗೂ ಮಹೇಶ್ವರಪ್ಪ, ಗ್ರಾಮದ ಹಿರಿಯರು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles

ಚಿತ್ರದುರ್ಗಕ್ಕೆ ಹರಿಯಲಿದೆ ‘ಭದ್ರೆ’: ಸೆ.6ರಿಂದ ಭದ್ರಾ ಮೇಲ್ದಂಡೆ ಯೋಜನೆಗೆ ಚಿತ್ರದುರ್ಗಕ್ಕೆ ಭದ್ರಾ ನೀರು ಹರಿಸಲು ನಿಗಮ ಮುಹೂರ್ತ ಫಿಕ್ಸ್!

ದಾವಣಗೆರೆ: ವಿಶ್ವೇಶ್ವರಯ್ಯ ಜಲ ನಿಗಮವು ಸರ್ಕಾರದ ಆದೇಶದನ್ವಯ ಸೆ.6ರಿಂದ ಭದ್ರಾ ಜಲಾಶಯದಿಂದ ಭದ್ರಾ ಮೇಲ್ದಂಡೆ ಯೋಜನೆ...

ದಾವಣಗೆರೆಯಲ್ಲಿ ಹಸಿ ಅಡಿಕೆ, ಚನ್ನಗಿರಿಯ ಅಡಿಕೆ ಮಾರುಕಟ್ಟೆಯ ಇಂದಿನ ಧಾರಣೆ ಎಷ್ಟು: ಕಂಪ್ಲೀಟ್ ಡೀಟೈಲ್ಸ್

ದಾವಣಗೆರೆ: ಚನ್ನಗಿರಿ ಅಡಿಕೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆಯಲ್ಲಿ ಅಲ್ಪ ಪ್ರಮಾಣದ ಕುಸಿತ ಕಂಡು ಬಂದಿದೆ. ರಾಜ್ಯ...

ನ್ಯೂಜೆರ್ಸಿಯಲ್ಲಿ ಸಿರಿಗೆರೆ ಶ್ರೀಗಳಿಗೆ ಭಕ್ತಿಪೂರ್ವಕ ಪಾದಪೂಜೆ: ರಘುಕುಮಾರ್ – ರಂಜಿತಾ ಎಸ್.ಆರ್. ನಿವಾಸದಲ್ಲಿ ದಂಪತಿಯಿಂದ ಭಕ್ತಿಪೂರ್ವಕ ಸೇವೆ, ನೂರಾರು ಭಕ್ತರ ಭಾಗಿ

ನ್ಯೂಜೆರ್ಜಿ: ಸರ್ವತ್ರ ಪೂಜನೀಯ ಶ್ರೀ ತರಳಬಾಳು ಜಗದ್ಗುರು ಶ್ರೀ 1108 ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರ...

ಒಕ್ಕಲಿಗ ಸಮುದಾಯದ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ: ಸೆಪ್ಟೆಂಬರ್ 30 ಕೊನೆಯ ದಿನ

ದಾವಣಗೆರೆ: ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2026-27ನೇ ಸಾಲಿನ ವಿವಿಧ ಸಾಲ ಹಾಗೂ...

ಫಾಲೋ
ಮಾಡಿ