Home ದಾವಣಗೆರೆ ಪ್ರಜಾಸೇವೆ’ ಅಭಿಯಾನಕ್ಕೆ ಚಾಲನೆ: ಹೊನ್ನಾಳಿಯಲ್ಲಿ ಸಮಾರಂಭ ಉದ್ಘಾಟಿಸಿದ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿದ್ದೇನು?
ದಾವಣಗೆರೆಹೊನ್ನಾಳಿ

ಪ್ರಜಾಸೇವೆ’ ಅಭಿಯಾನಕ್ಕೆ ಚಾಲನೆ: ಹೊನ್ನಾಳಿಯಲ್ಲಿ ಸಮಾರಂಭ ಉದ್ಘಾಟಿಸಿದ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿದ್ದೇನು?

Share
ಎಸ್ ಎಸ್ ಮಲ್ಲಿಕಾರ್ಜುನ್
Share

ದಾವಣಗೆರೆ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಪ್ರಜಾಸೇವೆ’ ಅಭಿಯಾನ ಜಿಲ್ಲೆಯ ಜನರಿಗೆ ಸರ್ಕಾರದ ಸೌಲಭ್ಯಗಳು ಹಾಗೂ ಆಡಳಿತವನ್ನು ನೇರವಾಗಿ ಸಾರ್ವಜನಿಕರ ಮನೆಬಾಗಿಲಿಗೆ ತಲುಪಿಸುವ ಯೋಜನೆಯಾಗಿದ್ದು ಈ ಯೋಜನೆಯನ್ನು ಸದುಪಯೋಗ ಪಡೆದುಕೊಳ್ಳುವಂತೆ ಗಣಿ ಮತ್ತು ಭೂ ವಿಜ್ಞಾನ ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಅವರು ತಿಳಿಸಿದರು.

ಅವರು ಹೊನ್ನಾಳಿ ತಾಲೂಕಿನ ಗೊಲ್ಲರಹಳ್ಳಿ ಯಲ್ಲಿ ಏರ್ಪಡಿಸಿದ್ದ ಪ್ರಜಾ ಸೇವಾ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಡಾ. ಸರ್ವಪಲ್ಲಿ ರಾಧಾಕೃಷ್ಣ ಅವರ ಭಾವಚಿತಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now

ಮಾನ್ಯ ಮುಖ್ಯಮಂತ್ರಿಗಳು ವಿಜಯನಗರ ಜಿಲ್ಲೆ ಕೂಡ್ಲಿಗಿ ಯಲ್ಲಿ ಪ್ರಜಾಸೇವೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ಅವರ ಆಶಯದಂತೆ ದಾವಣಗೆರೆ ಜಿಲ್ಲೆಯಲ್ಲೂ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ತಕ್ಷಣ ಪರಿಹರಿಸುವ ನಿಟ್ಟಿನಲ್ಲಿ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ” ಎಂದು ತಿಳಿಸಿದರು. ಪ್ರಜಾಸೇವೆ ಅಭಿಯಾನ ಸಾರ್ವಜನಿಕರು ಹಾಗೂ ಬಡಜನರಿಗೆ ಯಾವುದೇ ಅಡೆತಡೆಯಿಲ್ಲದೆ ಮತ್ತು ಭ್ರಷ್ಟಾಚಾರರಹಿತವಾಗಿ ಸರ್ಕಾರದ ಸೇವೆಗಳನ್ನು ತಲುಪಿಸುವುದು, ಈ ಅಭಿಯಾನದ ಮುಖ್ಯ ಉದ್ದೇಶ ಎಂದರು.

ಜಿಲ್ಲಾಡಳಿತವು ಸಂಪೂರ್ಣವಾಗಿ ಸಾರ್ವಜನಿಕರು ಮತ್ತು ರೈತರ ಬೆಂಬಲಕ್ಕೆ ನಿಂತಿದ್ದು, ಯಾವುದೇ ರೀತಿಯ ಸಮಸ್ಯೆಗಳಾಗದಂತೆ ಪಾರದರ್ಶಕವಾಗಿ ಕಾರ್ಯನಿರ್ವಹಿಸಲಾಗುವುದು. ಜಿಲ್ಲೆಯಲ್ಲಿ ಸಾರ್ವಜನಿಕ ಸೇವೆಗಳನ್ನು ಇನ್ನಷ್ಟು ವಿಸ್ತರಿಸುವ ಹಾಗೂ ಆಡಳಿತವನ್ನು ಜನಸ್ನೇಹಿಗೊಳಿಸುವ ನಿಟ್ಟಿನಲ್ಲಿ ಆನ್‍ಲೈನ್ ಮೂಲಕ ಪ್ರಮುಖ ಯೋಜನೆಗಳು ಮತ್ತು ಸೇವಾ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿದೆ. ಸಾರ್ವಜನಿಕರಿಗೆ ತ್ವರಿತ ಹಾಗೂ ಪಾರದರ್ಶಕ ಸೇವೆ ತಲುಪಿಸಲು ಅಗತ್ಯ ಕ್ರಮ ವಹಿಸುತ್ತಿವೆ. ಸಾರ್ವಜನಿಕರು ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ‘ಗೃಹಲಕ್ಷ್ಮಿ’, ‘ಶಕ್ತಿ’, ‘ಅನ್ನಭಾಗ್ಯ’ ಮತ್ತು ‘ಯುವನಿಧಿ’ ಸೇರಿದಂತೆ ಸರ್ಕಾರದ ಎಲ್ಲಾ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ತಲುಪುತ್ತಿರುವುದನ್ನು ಖಾತರಿಪಡಿಸಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲೆಯ ಎಲ್ಲಾ ಶಾಸಕರು ಮತ್ತು ಜನಪ್ರತಿನಿಧಿಗಳ ಸಹಯೋಗದೊಂದಿಗೆ ಪ್ರತಿ ತಿಂಗಳ ಎರಡನೇ ಮತ್ತು ಕೊನೆಯ ಶನಿವಾರ ‘ಪ್ರಜಾಸೇವೆ’ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಈಗಾಗಲೇ ಹೊನ್ನಾಳಿಯಲ್ಲಿ ಕಾರ್ಯಕ್ರಮ ನೆರವೇರಿದ್ದು, ಚನ್ನಗಿರಿ, ಜಗಳೂರು, ಹರಿಹರ ಸೇರಿದಂತೆ ಇತರ ತಾಲ್ಲೂಕುಗಳಲ್ಲಿ ಮುಂದಿನ ದಿನಗಳಲ್ಲಿ (ನವೆಂಬರ್ ವೇಳೆಗೆ) ಹಂತ-ಹಂತವಾಗಿ ವಿಸ್ತರಿಸಲಾಗುವುದು ಎಂದರು.

Share

Leave a comment

Leave a Reply

Your email address will not be published. Required fields are marked *

Related Articles

ದಾವಣಗೆರೆ: ಕರ್ನಾಟಕ ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಸೌಲಭ್ಯ: ಅರ್ಜಿ ಆಹ್ವಾನ

ದಾವಣಗೆರೆ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ...

ದಾವಣಗೆರೆಯಲ್ಲಿ ಉಚಿತ ಆಧುನಿಕ ಹೈನುಗಾರಿಕೆ ತರಬೇತಿ: ಆಸಕ್ತ ರೈತರಿಂದ ಅರ್ಜಿ ಆಹ್ವಾನ

ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಹೈನುಗಾರಿಕೆ ತರಬೇತಿ ಸೆಪ್ಟೆಂಬರ್ 8...

ದಾವಣಗೆರೆ: ಸೆಪ್ಟೆಂಬರ್ 9 ರಂದು ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ – ಕ್ರೀಡಾಪಟುಗಳಿಗೆ ಸುವರ್ಣಾವಕಾಶ!

ದಾವಣಗೆರೆ: ತಾಲ್ಲೂಕು ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಪ್ರಸಕ್ತ...

“ಪೌರಕಾರ್ಮಿಕರ ಹುದ್ದೆಗಳ ನೇಮಕಾತಿ ವಿಚಾರದಲ್ಲಿ ಮಧ್ಯವರ್ತಿಗಳ ಬಗ್ಗೆ ಹುಷಾರಾಗಿರಿ”: ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರ ಎಚ್ಚರಿಕೆ!

ದಾವಣಗೆರೆ: ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 210 ನೇರಪಾವತಿ ಪೌರಕಾರ್ಮಿಕರ ಹುದ್ದೆಗಳನ್ನು ಭರ್ತಿ ಮಾಡಲು ಹೊರಗುತ್ತಿಗೆ...

ಫಾಲೋ
ಮಾಡಿ