Home ದಾವಣಗೆರೆ ದಾವಣಗೆರೆ ಜಿಲ್ಲೆಯ ಬರಪೀಡಿತ 4 ತಾಲೂಕುಗಳಿಗೆ ಪರಿಹಾರದ ಬಗ್ಗೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಮಹತ್ವದ ಮಾಹಿತಿ!
ದಾವಣಗೆರೆಹೊನ್ನಾಳಿ

ದಾವಣಗೆರೆ ಜಿಲ್ಲೆಯ ಬರಪೀಡಿತ 4 ತಾಲೂಕುಗಳಿಗೆ ಪರಿಹಾರದ ಬಗ್ಗೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಮಹತ್ವದ ಮಾಹಿತಿ!

Share
ದಾವಣಗೆರೆ
Share

ದಾವಣಗೆರೆ: ಜಿಲ್ಲೆಯ ಹೊನ್ನಾಳಿ, ಜಗಳೂರು, ಹರಿಹರ ಹಾಗೂ ದಾವಣಗೆರೆ ತಾಲ್ಲೂಕುಗಳು ಬರಪೀಡಿತ ಪ್ರದೇಶಗಳೆಂದು ಗುರುತಿಸಲ್ಪಟ್ಟಿವೆ. ಜಿಲ್ಲೆಯ ಒಟ್ಟು 4 ತಾಲ್ಲೂಕುಗಳಲ್ಲಿ ಉಂಟಾಗಿರುವ ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ಒಟ್ಟು ₹469 ಕೋಟಿ ಪರಿಹಾರ ನೀಡುವಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಜಿಲ್ಲಾಡಳಿತದಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ. ಜಿಲ್ಲೆಯ 31,000 ರೈತರಿಗೆ ₹42 ಕೋಟಿ ಬೆಳೆ ವಿಮೆ ಪರಿಹಾರವನ್ನು ಶೀಘ್ರವೇ ತಲುಪಿಸಲು ಅಗತ್ಯ ಕ್ರಮ ಹಾಗೂ ಪ್ರಸ್ತಾವನೆಗಳನ್ನು ಸಿದ್ಧಪಡಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ತಿಳಿಸಿದರು.

ಅವರು ಹೊನ್ನಾಳಿ ತಾಲೂಕಿನ ಗೊಲ್ಲರಹಳ್ಳಿ ಯಲ್ಲಿ ಏರ್ಪಡಿಸಿದ್ದ ಪ್ರಜಾ ಸೇವಾ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಡಾ. ಸರ್ವಪಲ್ಲಿ ರಾಧಾಕೃಷ್ಣ ಅವರ ಭಾವಚಿತಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now

ಮಳೆ ಕೊರತೆ ಮತ್ತು ಬೆಳೆ ಹಾನಿಯ ನಿಖರ ಸಮೀಕ್ಷೆಗಾಗಿ ವಿಶೇಷ ತಂತ್ರಜ್ಞಾನವನ್ನು ಬಳಸಿಕೊಂಡು, ಪ್ರತಿಯೊಬ್ಬ ಸಂತ್ರಸ್ತ ರೈತನಿಗೂ ನ್ಯಾಯಯುತ ಪರಿಹಾರ ತಲುಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಜಿಲ್ಲೆಯ ಶಾಸಕರು ಸಾರ್ವಜನಿಕರ ಕುಂದುಕೊರತೆಗಳಿಗೆ ಸ್ಪಂದಿಸಿ, ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಸರ್ಕಾರದಿಂದ ಲಭ್ಯವಾಗುವ ಅನುದಾನ ಹಾಗೂ ಯೋಜನೆಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು, ತಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಬೇಕು ಎಂದು ಕರೆ ನೀಡಿದರು.

ಜಿಲ್ಲೆಯಲ್ಲಿ ಎದುರಾಗಿರುವ ಬರ ಪರಿಸ್ಥಿತಿ ಹಾಗೂ ಇತ್ತೀಚಿನ ಮಳೆಯಿಂದಾದ ಹಾನಿಗೆ ಸುಮಾರು 15 ಕೋಟಿ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರು, ಪ್ರವಾಹ ಹಾನಿ ತಡೆ ಹಾಗೂ ಮೂಲಸೌಕರ್ಯಗಳ ದುರಸ್ತಿಗೆ ಯೋಜನೆ ರೂಪಿಸಲಾಗಿದೆ. ಈ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕೃಷಿ, ನೀರಾವರಿ ಹಾಗೂ ಇತರ ಪ್ರಮುಖ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕೆಲಸ ಮಾಡಿ, ಪ್ರಜಾಸೇವೆಗೆ ಆದ್ಯತೆ ನೀಡಬೇಕು. ಪ್ರಜಾ ಸೇವಾ ಅಭಿಯಾನ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕು ಎಂದು ತಿಳಿಸಿದರು .

ಹೊನ್ನಾಳಿ ಶಾಸಕ ಡಿ. ಜಿ.ಶಾಂತನಗೌಡ ಅವರು ಮಾತನಾಡಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ‘ಪ್ರಜಾಸೇವೆ’ ಕಾರ್ಯಕ್ರಮಕ್ಕೆ ಹೊನ್ನಾಳಿ ತಾಲೂಕಿನಲ್ಲಿ ಚಾಲನೆ ನೀಡಲಾಗಿದೆ. ಸಾರ್ವಜನಿಕರ ಸಮಸ್ಯೆಗಳನ್ನು ಅವರ ಮನೆ ಬಾಗಿಲಲ್ಲೇ ಬಗೆಹರಿಸುವ ಉದ್ದೇಶದಿಂದ ಈ ವಿನೂತನ ಯೋಜನೆಯನ್ನು ಜಾರಿಗೆ ತರಲಾಗಿದೆ, ಇನ್ಮುಂದೆ ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗಾಗಿ ತಾಲೂಕು ಕಚೇರಿ ಅಥವಾ ಜಿಲ್ಲಾ ಕಚೇರಿಗಳಿಗೆ ಅಲೆಯುವ ಅಗತ್ಯವಿಲ್ಲ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೇ ಸಾರ್ವಜನಿಕರ ಮನೆ ಬಾಗಿಲಿಗೆ ತೆರಳಿ ಲಿಖಿತ ಅರ್ಜಿ ಹಾಗೂ ಕುಂದುಕೊರತೆಗಳನ್ನು ಸ್ವೀಕರಿಸಿ, ಶೀಘ್ರ ಪರಿಹಾರ ಒದಗಿಸಲಿದ್ದಾರೆ ಎಂದರು.

ಸರ್ಕಾರ ಅಧಿಕಾರಕ್ಕೆ ಬಂದ ನಂತರ ಘೋಷಿಸಿದ ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನು ಶೇ. 100 ರಷ್ಟು ಯಶಸ್ವಿಯಾಗಿ ಅನುಷ್ಠಾನಕ್ಕೆ ತರಲಾಗಿದ್ದು, ಇಡೀ ದೇಶಕ್ಕೆ ಕರ್ನಾಟಕ ಮಾದರಿಯಾಗಿದೆ ಎಂದು ತಿಳಿಸಿದರು.

ಹೊನ್ನಾಳಿ ತಾಲೂಕಿನಲ್ಲಿ ಕಳೆದ ಅವಧಿಯಲ್ಲಿ 367 ಪೋಡಿ ಮುಕ್ತ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗಿದೆ. ಜೊತೆಗೆ 3,587 ಭೌತಿಕ ಕಾರ್ಯಗಳನ್ನು ಹಾಗೂ 94. ಸಿ ಅಡಿಯಲ್ಲಿ ಮನೆ ಇಲ್ಲದ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಜಿ.ಎಂ ಅವರು ಪ್ರಸ್ತಾವಿಕವಾಗಿ ಮಾತನಾಡಿದರು. ಬಯಲು ಸೀಮೆ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಂಜಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಶಮ್ಲಾ ಇಕ್ಬಾಲ್, ಪೊಲೀಸ್ ವರಿಷ್ಠಾಧಿಕಾರಿ ಡಾ. ಶೇಖರ್ ಹೆಚ್ ಟಿ, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಹೊನ್ನಾಳಿ ಉಪ ವಿಭಾಗಾಧಿಕಾರಿ ಚನ್ನಪ್ಪ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

 

Share

Leave a comment

Leave a Reply

Your email address will not be published. Required fields are marked *

Related Articles

ಕಂದಾಯ ಇಲಾಖೆ ನೇಮಕಾತಿ ಪರೀಕ್ಷೆ: ಪಾರದರ್ಶಕತೆ ಹಾಗೂ ಬಿಗಿ ಭದ್ರತೆಯೊಂದಿಗೆ ಪರೀಕ್ಷೆ ನಡೆಸಲು ಕಟ್ಟುನಿಟ್ಟಿನ ಸೂಚನೆ

ದಾವಣಗೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಅಕ್ಟೋಬರ್ 2 ರಂದು ನಡೆಯುವ ಭೂಮಾಪಕರ ಹುದ್ದೆಗಳ ನೇರ ನೇಮಕಾತಿ...

ದಾವಣಗೆರೆ ಪಾಲಿಕೆಯಲ್ಲಿ ಇ-ಸ್ವತ್ತು ನಮೂನೆ-2ರಲ್ಲಿನ ಲೋಪದೋಷಗಳ ತ್ವರಿತವಾಗಿ ತಿದ್ದುಪಡಿ ಮಾಡಿಕೊಡುವಂತೆ ಒತ್ತಾಯಿಸಿ ಮನವಿ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರು ತಮ್ಮ ಮನೆ ಹಾಗೂ ನಿವೇಶನಗಳಿಗೆ ಸಂಬಂಧಿಸಿದ ಇ-ಸ್ವತ್ತು...

ರೇಷನ್ ಕಾರ್ಡ್, ಮತದಾನದ ಹಕ್ಕು ರದ್ದಾಗುವ ಭೀತಿ: ಎಸ್‌ಐಆರ್ ವಿರುದ್ಧ ಶಾಸಕ ಸಮರ್ಥ್ ಶಾಮನೂರು ಕಿಡಿ

ದಾವಣಗೆರೆ: ಎಸ್‌ ಐಆರ್‌ ಪ್ರಕ್ರಿಯೆಯಿಂದ ಜನಸಾಮಾನ್ಯರಲ್ಲಿ ಆತಂಕ ಮತ್ತು ಭಯದ ವಾತಾವರಣ ನಿರ್ಮಾಣವಾಗಿದೆ. ಚುನಾವಣಾ ಅಧಿಕಾರಿಗಳು...

ಪ್ರಜಾಪ್ರಭುತ್ವ ರಕ್ಷಣೆಗೆ ಹೋರಾಟ ನಿರಂತರ; ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ...

ಫಾಲೋ
ಮಾಡಿ