ಬೆಂಗಳೂರು: ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (MoEFCC) ‘ಸ್ವಚ್ಛ ವಾಯು ದಿವಸ 2026’ ಅಂಗವಾಗಿ ಘೋಷಿಸಿರುವ 2025-26 ನೇ ಸಾಲಿನ “ಸ್ವಚ್ಛ ವಾರ್ಡ್ ವಾಯು ಸರ್ವೇಕ್ಷಣೆ 2025” ಮೌಲ್ಯಮಾಪನದಲ್ಲಿ ದಾವಣಗೆರೆ ನಗರವು ರಾಜ್ಯಮಟ್ಟದ ಎರಡು ಪ್ರಮುಖ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.
ರಾಷ್ಟ್ರೀಯ ಸ್ವಚ್ಛ ವಾಯು ಕಾರ್ಯಕ್ರಮದ (NCAP) ನಾನ್-ಅಟೈನ್ಮೆಂಟ್ ನಗರವಾಗಿರುವ ದಾವಣಗೆರೆಯು, ಜನಸಂಖ್ಯೆ ಆಧಾರಿತ ವರ್ಗೀಕರಣದಡಿ ಅತ್ಯುತ್ತಮ ಸಾಧನೆ ತೋರಿದೆ. ನಗರದ ಎಸ್ಎಸ್ ಬಡಾವಣೆ – ಬಿ ಬ್ಲಾಕ್ (ಜನಸಂಖ್ಯೆ ವರ್ಗ 2) ಹಾಗೂ ಡಿಸಿಎಂ ಟೌನ್ಶಿಪ್ (ಜನಸಂಖ್ಯೆ ವರ್ಗ 3) ಈ ವಿಭಾಗಗಳಲ್ಲಿ ಪ್ರಶಸ್ತಿಯನ್ನು ಪಡೆದುಕೊಂಡಿವೆ.
ಸದರಿ ಗೌರವದೊಂದಿಗೆ ನಗರಕ್ಕೆ ಒಟ್ಟು ರೂ 25.00 ಲಕ್ಷ ರೂಪಾಯಿಗಳ ನಗದು ಬಹುಮಾನ ಲಭಿಸಿದೆ. ವಾಯು ಮಾಲಿನ್ಯ ನಿಯಂತ್ರಣ, ಪರಿಸರ ಜಾಗೃತಿ ಹಾಗೂ ನೈರ್ಮಲ್ಯ ನಿರ್ವಹಣೆಯಲ್ಲಿ ಸ್ಥಳೀಯ ನಿವಾಸಿಗಳು ಮತ್ತು ಮಹಾನಗರ ಪಾಲಿಕೆಯ ಸತತ ಪ್ರಯತ್ನಕ್ಕೆ ಈ ಪ್ರಶಸ್ತಿ ಸಾಕ್ಷಿಯಾಗಿದೆ.
ಮಹಾನಗರ ಪಾಲಿಕೆ ಅಧಿಕಾರಿಗಳು, ಸ್ಥಳೀಯ ಪ್ರತಿನಿಧಿಗಳು ಹಾಗೂ ದಾವಣಗೆರೆಯ ನಾಗರಿಕರು ತೋರಿದ ಸಹಕಾರ ಮತ್ತು ಶ್ರಮಕ್ಕೆ ಈ ಮೂಲಕ ಕೃತಜ್ಞತೆಗಳನ್ನು ಸಲ್ಲಿಸಲಾಗಿದ್ದು, ಮುಂದಿನ ದಿನಗಳಲ್ಲಿಯೂ ನಗರದ ಗಾಳಿಯ ಗುಣಮಟ್ಟವನ್ನು ಇನ್ನಷ್ಟು ಸುಧಾರಿಸಲು ಬದ್ಧರಾಗಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
- clean air survey Karnataka
- Davangere awards
- Davangere Mahanagara Palike.
- DCM Township Davangere
- MoEFCC India
- NCAP non attainment city
- SS Layout B Block Davangere
- Swachh Ward Vayu Sarvekshan 2025
- ಎಸ್ಎಸ್ ಬಡಾವಣೆ
- ಕರ್ನಾಟಕ ಸುದ್ದಿ.
- ಕೇಂದ್ರ ಪರಿಸರ ಸಚಿವಾಲಯ
- ಡಿಸಿಎಂ ಟೌನ್ಶಿಪ್
- ದಾವಣಗೆರೆ ಪ್ರಶಸ್ತಿ
- ದಾವಣಗೆರೆ ಮಹಾನಗರ ಪಾಲಿಕೆ
- ಸ್ವಚ್ಛ ವಾಯು ದಿವಸ 2026
- ಸ್ವಚ್ಛ ವಾರ್ಡ್ ವಾಯು ಸರ್ವೇಕ್ಷಣೆ 2025
Leave a comment