Home ಚಿರತೆ ದಾಳಿ ವೇಳೆ ಗಾಯಗೊಂಡಿದ್ದ ಸಿಬ್ಬಂದಿ ಆರೋಗ್ಯ ವಿಚಾರಿಸಿದ ಸಚಿವ ಬಸವಂತಪ್ಪ: ವನ್ಯಜೀವಿ ಸಂಚಾರ ವಲಯದಲ್ಲಿ ವೇಗ ನಿಯಂತ್ರಣಕ್ಕೆ ಸೂಚನೆ
Homeಕ್ರೈಂ ಸುದ್ದಿದಾವಣಗೆರೆ

ಚಿರತೆ ದಾಳಿ ವೇಳೆ ಗಾಯಗೊಂಡಿದ್ದ ಸಿಬ್ಬಂದಿ ಆರೋಗ್ಯ ವಿಚಾರಿಸಿದ ಸಚಿವ ಬಸವಂತಪ್ಪ: ವನ್ಯಜೀವಿ ಸಂಚಾರ ವಲಯದಲ್ಲಿ ವೇಗ ನಿಯಂತ್ರಣಕ್ಕೆ ಸೂಚನೆ

Share
ಚಿರತೆ
Share

ದಾವಣಗೆರೆ: ಅಪಘಾತಕ್ಕೀಡಾಗಿ ಗಾಯಗೊಂಡು ರಸ್ತೆಯ ಬದಿಯ ಚರಂಡಿಯಲ್ಲಿ ನರಳಾಡುತ್ತಿದ್ದ ಚಿರತೆಯನ್ನು ರಕ್ಷಿಸಿ ಸೆರೆಹಿಡಿಯಲು ಮುಂದಾದ ವೇಳೆ ಅರಣ್ಯ ಸಿಬ್ಬಂದಿಯೊಬ್ಬರ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದ ಘಟನೆ ತಾಲೂಕಿನ ಆನಗೋಡು ಸಮೀಪದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಮಂಗಳವಾರ ನಡೆದಿದೆ.

ಚಿರತೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ಅರಣ್ಯ ಸಿಬ್ಬಂದಿ ಮರಳಸಿದ್ದಪ್ಪ ಅವರನ್ನು ನಗರದ ಎಸ್.ಎಸ್. ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now

ರಾತ್ರಿ ವೇಳೆ ರಸ್ತೆ ದಾಟುತ್ತಿದ್ದ ಚಿರತೆಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಅದು ಗಾಯಗೊಂಡು ಹೆದ್ದಾರಿ ಬದಿಯ ಚರಂಡಿಯಲ್ಲಿ ನರಳಾಡುತ್ತಿತ್ತು. ಬೆಳಗ್ಗೆ ಸಾರ್ವಜನಿಕರು ಚಿರತೆ ಇರುವುದನ್ನು ಗಮನಿಸಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು.

ಮಾಹಿತಿ ದೊರೆತ ತಕ್ಷಣ ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಸುರಕ್ಷಿತವಾಗಿ ಸೆರೆಹಿಡಿಯಲು ಕಾರ್ಯಾಚರಣೆ ಆರಂಭಿಸಿದರು. ಈ ವೇಳೆ ಬಲೆ ಹಾಕುವ ಸಂದರ್ಭದಲ್ಲಿ ಏಕಾಏಕಿ ಚಿರತೆ ಸಿಬ್ಬಂದಿ ಮೇಲೆ ಎರಗಿ ದಾಳಿ ನಡೆಸಿದೆ. ದಾಳಿಯ ತೀವ್ರತೆಗೆ ಮರಳಸಿದ್ದಪ್ಪ ಅವರ ತೊಡೆ ಹಾಗೂ ಬೆನ್ನಿನ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ತಕ್ಷಣ ಅವರನ್ನು ದಾವಣಗೆರೆ ಎಸ್.ಎಸ್. ಹೈಟೆಕ್ ಆಸ್ಪತ್ರೆಗೆ ಕರೆದೊಯ್ದು ತುರ್ತು ಚಿಕಿತ್ಸೆ ನೀಡಲಾಗಿದೆ.

ಹೆದ್ದಾರಿಯಲ್ಲಿ ‘ವನ್ಯಜೀವಿ ಸಂಚಾರ ವಲಯ’ ನಾಮಫಲಕ:

ವನ್ಯಜೀವಿಗಳ ಸಂಚಾರ ಹೆಚ್ಚಿರುವ ಪ್ರಮುಖ ಹೆದ್ದಾರಿ ಹಾಗೂ ರಸ್ತೆಗಳಲ್ಲಿ ‘ವನ್ಯಜೀವಿ ಸಂಚಾರ ವಲಯ’ ಎಂಬ ಎಚ್ಚರಿಕೆ ನಾಮಫಲಕಗಳನ್ನು ಅಳವಡಿಸಬೇಕು. ವಾಹನ ಸವಾರರು ವೇಗ ಕಡಿಮೆ ಮಾಡಿಕೊಂಡು ಸಂಚರಿಸುವಂತೆ ಸೂಚಿಸುವ ಫಲಕಗಳ ಮೂಲಕ ಜಾಗೃತಿ ಮೂಡಿಸಬೇಕು ಎಂದು ಸಚಿವ ಬಸವಂತಪ್ಪ ಹೇಳಿದರು.

ಕಾಡಿನಲ್ಲೇ ನೀರು–ಆಹಾರ ಒದಗಿಸಲು ಸೂಚನೆ:

ಕಾಡಿನಲ್ಲಿ ನೀರು ಮತ್ತು ಆಹಾರದ ಲಭ್ಯತೆ ಕಡಿಮೆಯಾಗುತ್ತಿರುವುದರಿಂದ ವನ್ಯಜೀವಿಗಳು ನಾಡಿನತ್ತ ಬರುತ್ತಿರುವ ಸಾಧ್ಯತೆ ಇದೆ. ಹೀಗಾಗಿ ಅರಣ್ಯದ ಸೂಕ್ಷ್ಮ ವಲಯಗಳನ್ನು ಗುರುತಿಸಿ ಪ್ರಾಣಿಗಳಿಗೆ ಕಾಡಿನೊಳಗೇ ಕುಡಿಯುವ ನೀರು ಮತ್ತು ಆಹಾರ ದೊರೆಯುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸೌರ ವಿದ್ಯುತ್ ಬೇಲಿ, ಟೆಂಚ್ ಅಳವಡಿಕೆಗೆ ನಿರ್ದೇಶನ:

ವನ್ಯಜೀವಿಗಳು ಕಾಡಿನಿಂದ ನಾಡಿನತ್ತ ಬರುವುದನ್ನು ತಡೆಯಲು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಅಗತ್ಯವಿರುವ ಪ್ರದೇಶಗಳಲ್ಲಿ ಟೆಂಚ್ ಹಾಗೂ ಸೌರ ವಿದ್ಯುತ್ ಬೇಲಿ ಅಳವಡಿಸಿ ವನ್ಯಜೀವಿಗಳ ಸಂರಕ್ಷಣೆ ಹಾಗೂ ಮಾನವ–ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ನಿರ್ದೇಶನ ನೀಡಿದರು.

ಅಪಘಾತಕ್ಕೀಡಾದ ಚಿರತೆಯ ರಕ್ಷಣೆಗೆ ತೆರಳಿದ್ದ ಸಿಬ್ಬಂದಿಯ ಮೇಲೆಯೇ ಚಿರತೆ ದಾಳಿ ನಡೆಸಿರುವುದು ಅರಣ್ಯ ಪ್ರದೇಶಗಳಂಚಿನಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷದ ಗಂಭೀರತೆಯನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ.

Share

Leave a comment

Leave a Reply

Your email address will not be published. Required fields are marked *

Related Articles

ಹಿರಿಯ ನಾಯಕರಿಂದಲೇ ಕೀಳುಮಟ್ಟದ ಪದಗಳ ಬಳಕೆ: ಸಮಾಜಕ್ಕೆ ನಾವೇನು ಸಂದೇಶ ನೀಡಬೇಕು? ಶಿವಗಂಗಾ ಬಸವರಾಜ್

ದಾವಣಗೆರೆ: ಏನ್ ಪದಗಳವು. ವರ್ಣಿಸಿ ವರ್ಣಿಸಿ ಮಾಧ್ಯಮದವರ ಬೈಯಬೇಕು. ನಾವು ಅದನ್ನೇ ಕಲಿತರೆ ಹೇಗಾಗುತ್ತೆ. ಸೀನಿಯರ್...

ದಾವಣಗೆರೆ ನೂತನ ಸಿಇಒ ಆಗಿ ಸಾಹಿತ್ಯ ಎಂ. ಆಲದಕಟ್ಟೆ ಅಧಿಕಾರ ಸ್ವೀಕಾರ: ಅಧಿಕಾರಿಗಳಿಗೆ ಖಡಕ್ ಆಗಿ ಹೇಳಿದ್ದೇನು?

ದಾವಣಗೆರೆ: ದಾವಣಗೆರೆ ಜಿಲ್ಲಾ ಪಂಚಾಯಿತಿಯ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸಾಹಿತ್ಯ ಎಂ. ಆಲದಕಟ್ಟೆ ಅವರು ಅಧಿಕಾರ...

ಛೇ… ಸಚಿವರ ಬಾಯಲ್ಲಿ ಇಂಥ ಮಾತು ಬರೋದಾ? ಹರಿಹರ ಬಿಜೆಪಿ ಶಾಸಕ ಬಿ. ಪಿ. ಹರೀಶ್ ವಿರುದ್ಧ ಎಸ್. ಎಸ್. ಮಲ್ಲಿಕಾರ್ಜುನ್ ಆಕ್ಷೇಪಾರ್ಹ ಪದ ಬಳಸಿ ಕೆಂಡ!

ದಾವಣಗೆರೆ: ಅವನ್ಯಾವನಿಗೋ ಅಣ್ಣ ಅಂತೀಯಾ, ನಿನ್ನ ಸ್ವಂತ ಅಣ್ಣನಿಗೆ ಅಣ್ಣ ಎಂದು ಹೇಳುತ್ತೀಯಾ. ಹೋಗು ಹೋಗು...

ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಇ – ಸ್ವತ್ತು ತಿದ್ದುಪಡಿಗೆ ಖಾತೆದಾರರ ಅಲೆದಾಟ ತಪ್ಪಿಸಿ: ಎಂ. ಜಿ. ಶ್ರೀಕಾಂತ್ ಒತ್ತಾಯ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಇ-ಸ್ವತ್ತು ತಿದ್ದುಪಡಿಗೆ ಖಾತೆದಾರರು ಅಲೆದಾಡುತ್ತಿದ್ದು, ಈ ಬಗ್ಗೆ ಅಧಿಕಾರಿಗಳು ಕ್ರಮ...

ಫಾಲೋ
ಮಾಡಿ