Home ದಾವಣಗೆರೆ ದಾವಣಗೆರೆಯಲ್ಲಿ ಗಣೇಶೋತ್ಸವ ವೇಳೆ ಸೌಂಡ್ ಸಿಸ್ಟಂ ಬಳಕೆ ಮಿತಿ ಕುರಿತು ಜಿಲ್ಲಾ ಸಚಿವರು, ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರ!
ದಾವಣಗೆರೆ

ದಾವಣಗೆರೆಯಲ್ಲಿ ಗಣೇಶೋತ್ಸವ ವೇಳೆ ಸೌಂಡ್ ಸಿಸ್ಟಂ ಬಳಕೆ ಮಿತಿ ಕುರಿತು ಜಿಲ್ಲಾ ಸಚಿವರು, ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರ!

Share
ದಾವಣಗೆರೆ
Share

ದಾವಣಗೆರೆ: ಗೌರಿ ಗಣೇಶ ಹಬ್ಬವನ್ನು ಶಾಂತಿಯುತ, ವಿಜೃಂಭಣೆ ಹಾಗೂ ಭಕ್ತಿ ಭಾವದಿಂದ ಆಚರಿಸಲು ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ಜಿಲ್ಲಾಧಿಕಾರಿ ಜಿ. ಎಂ. ಗಂಗಾಧರ ಸ್ವಾಮಿ ಹೇಳಿದರು.

ನಗರದ ಜಿಲ್ಲಾಧಿಕಾರಿ ತುಂಗಭದ್ರಾ ಸಭಾಂಗಣದಲ್ಲಿ ಗೌರಿ ಗಣೇಶ ಹಬ್ಬದ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ನಾಗರಿಕ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now

ಮುಂಬರುವ ಗಣೇಶೋತ್ಸವ ಹಬ್ಬವನ್ನು ಶಾಂತಿಯುತ ಹಾಗೂ ಸೌಹಾರ್ದಯುತವಾಗಿ ಆಚರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಂಪೂರ್ಣ ಸಹಕಾರ ನೀಡಲಿದ್ದು, ಸಾರ್ವಜನಿಕರ ಸುರಕ್ಷತೆ ಮತ್ತು ನೈರ್ಮಲ್ಯಕ್ಕೆ ಮೊದಲ ಆದ್ಯತೆ ನೀಡಲಾಗುವುದು ಹಾಗೂ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಪಡೆಯಲು ತಹಸೀಲ್ದಾರ್, ತಾಲೂಕು ಪಂಚಾಯಿತಿ ಇಒ, ಡಿವೈಎಸ್ಪಿ, ಬೆಸ್ಕಾಂ, ಅಗ್ನಿಶಾಮಕ ದಳ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳನ್ನೊಳಗೊಂಡ ‘ಸಿಂಗಲ್ ವಿಂಡೋ’ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು. ಅರ್ಜಿದಾರರು ತಾಲೂಕು ಕಚೇರಿಗೆ ಅಲೆಯುವ ಅಗತ್ಯವಿಲ್ಲದೆ, ಸ್ಥಳೀಯ ಪೊಲೀಸ್ ಠಾಣೆಯಲ್ಲೇ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬಹುದು ಎಂದರು.

ಮೆರವಣಿಗೆ ಸಂದರ್ಭದಲ್ಲಿ ವಿದ್ಯುತ್ ತಂತಿಗಳಿಂದ ಆಗುವ ಅನಾಹುತಗಳನ್ನು ತಡೆಯಲು ಹೆಚ್ಚಿನ ಜಾಗ್ರತೆ ವಹಿಸಬೇಕು. ಬೆಂಕಿ ಅವಘಡಗಳು ಸಂಭವಿಸದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದು ಕಡ್ಡಾಯ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಮೂರ್ತಿ ವಿಸರ್ಜನೆಯ ನಂತರ ಪ್ಲಾಸ್ಟಿಕ್ ಹಾಗೂ ಇತರ ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಎಸೆಯದೆ ಪ್ರತ್ಯೇಕಿಸಿ (ಸೆಗ್ರಿಗೇಷನ್) ಮಾಡಬೇಕು. ಬಾತಿ ಕೆರೆ ಸೇರಿದಂತೆ ಮೂರ್ತಿ ವಿಸರ್ಜನೆ ಮಾಡುವ ಸ್ಥಳಗಳಲ್ಲಿ ಸ್ವಚ್ಛವಾದ ನೀರನ್ನು ತುಂಬಿಸಿ, ಪ್ರತಿದಿನ ನೈರ್ಮಲ್ಯ ಕಾಪಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಡಿಜೆ ಬಳಕೆ ಚರ್ಚಿಸಿ ನಿರ್ಧಾರ:

ದೊಡ್ಡ ಮಟ್ಟದ ಮೆರವಣಿಗೆ ಹಾಗೂ ಕಾರ್ಯಕ್ರಮಗಳು ನಡೆಯುವ ದಿನಗಳಂದು ಶಾಂತಿ, ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಡ್ರೈ ಡೇ (ಮದ್ಯ ಮಾರಾಟ ನಿಷೇಧ) ಜಾರಿಗೆ ತರಲು ಎಸ್ಪಿ ಅವರ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು, ಶಬ್ದ ಮಾಲಿನ್ಯ ಮತ್ತು ಸಾರ್ವಜನಿಕರಿಗೆ, ವಿಶೇಷವಾಗಿ ವೃದ್ಧರು ಹಾಗೂ ರೋಗಿಗಳಿಗೆ ಆಗುವ ತೊಂದರೆಯನ್ನು ತಡೆಯಲು ಡಿಜೆ ಬಳಕೆಗೆ ಅವಕಾಶವಿಲ್ಲ ಎಂದು ತಿಳಿಸಿದರು.

ತುಮಕೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಮಾದರಿಯಲ್ಲೇ ಹೆಚ್ಚು ಶಬ್ದ ಉಂಟುಮಾಡುವ ಡಿಜೆ ಹಾಗೂ ‘ಪ್ರೆಷರ್ ಮಿಟ್’ ಸೌಂಡ್ ಸಿಸ್ಟಮ್‍ಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನೆರೆ ಜಿಲ್ಲೆಗಳಿಂದ ಬರುವ ಡಿಜೆ ಸಿಸ್ಟಮ್‍ಗಳಿಗೂ ನಿರ್ಬಂಧಧ ಹೇರಲಾಗಿದೆ. ಧ್ವನಿವರ್ಧಕಗಳ (ಸ್ಪೀಕರ್) ಬಳಕೆ ಕುರಿತು ಸಚಿವರು ಮತ್ತು ಎಸ್‍ಪಿ ಅವರೊಂದಿಗೆ ಚರ್ಚಿಸಿ ಶೀಘ್ರವೇ ಅಂತಿಮ ನಿರ್ಧಾರ ತಿಳಿಸಲಾಗುವುದು ಎಂದರು.

Share

Leave a comment

Leave a Reply

Your email address will not be published. Required fields are marked *

Related Articles

ದಾವಣಗೆರೆ ಅಭಿವೃದ್ಧಿಗೆ ಬಿಗ್ ಬೂಸ್ಟ್: ಕರೂರು ಬಳಿ 200 ಎಕರೆ ಜಾಗದಲ್ಲಿ ಅತ್ಯಾಧುನಿಕ ಲೇಔಟ್ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್!

ದಾವಣಗೆರೆ: ದಾವಣಗೆರೆ ಮತ್ತು ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯು ಇಂದು ದಾವಣಗೆರೆಯಲ್ಲಿ ಗಣಿ...

ದಾವಣಗೆರೆ ಲೋಕಾಯುಕ್ತ ನೂತನ ಪೊಲೀಸ್ ಅಧೀಕ್ಷಕರಾಗಿ ಆ್ಯಂಟನಿ ಜಾನ್ ಅಧಿಕಾರ ಸ್ವೀಕಾರ

ದಾವಣಗೆರೆ:ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಆ್ಯಂಟನಿ ಜಾನ್. ಜೆ.ಕೆ ಅವರು ನೂತನವಾಗಿ ಅಧಿಕಾರ ಸ್ವೀಕರಿಸಿದ್ದಾರೆ.  ಇಲ್ಲಿಯವರೆಗೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಂ.ಎಸ್. ಕೌಲಾಪೂರೆ ರವರು ವರ್ಗಾವಣೆಗೊಂಡಿದ್ದರಿಂದ, ತೆರವಾದ ಸ್ಥಾನಕ್ಕೆ ಆ್ಯಂಟನಿ ಜಾನ್. ಜೆ.ಕೆ ರವರನ್ನು ನೇಮಕಗೊಳಿಸಿ ಸರ್ಕಾರ ಆದೇಶಿಸಿತ್ತು....

ದಾವಣಗೆರೆಯ ಬಹುತೇಕ ವಾರ್ಡ್ ಗಳ ಗಣೇಶ ವಿಗ್ರಹಗಳ ತಾತ್ಕಾಲಿಕ ವಿಸರ್ಜನಾ ವ್ಯವಸ್ಥೆಗೆ ನಿಗದಿಪಡಿಸಿರುವ ಸ್ಥಳದ ಕಂಪ್ಲೀಟ್ ಡೀಟೈಲ್ಸ್!

ದಾವಣಗೆರೆ: ಸೆಪ್ಟೆಂಬರ್ 14, 16 ಮತ್ತು 18 ರಂದು  ಶ್ರೀ ಗಣೇಶ ವಿಗ್ರಹಗಳ ತಾತ್ಕಾಲಿಕ ವಿಸರ್ಜನಾ...

5 ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೆ ಒತ್ತಾಯಿಸಿ ದಾವಣಗೆರೆಯಲ್ಲಿ ಬ್ಯಾಂಕ್ ಉದ್ಯೋಗಿಗಳ ಮುಷ್ಕರ!

ದಾವಣಗೆರೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಐದು ದಿನಗಳ ಬ್ಯಾಕಿಂಗ್ ವ್ಯವಸ್ಥೆ ಜಾರಿಗೆ ಒತ್ತಾಯಿಸಿ ಬ್ಯಾಂಕ್...

ಫಾಲೋ
ಮಾಡಿ