Home ದಾವಣಗೆರೆ ಗಣೇಶ ಹಬ್ಬಕ್ಕೆ ರಾತ್ರಿ 12 ಗಂಟೆಯವರೆಗೆ ಬಸ್ ಸೇವೆ, ರಿಯಾಯಿತಿ ದರದಲ್ಲಿ ಕಲಾತಂಡಗಳು: ಕುಡಿಯುವ ನೀರಿನ ಕೆರೆಗಳಲ್ಲಿ ಗಣಪತಿ ವಿಸರ್ಜನೆ ನಿಷೇಧ
ದಾವಣಗೆರೆ

ಗಣೇಶ ಹಬ್ಬಕ್ಕೆ ರಾತ್ರಿ 12 ಗಂಟೆಯವರೆಗೆ ಬಸ್ ಸೇವೆ, ರಿಯಾಯಿತಿ ದರದಲ್ಲಿ ಕಲಾತಂಡಗಳು: ಕುಡಿಯುವ ನೀರಿನ ಕೆರೆಗಳಲ್ಲಿ ಗಣಪತಿ ವಿಸರ್ಜನೆ ನಿಷೇಧ

Share
ಗಣೇಶ
Share

ದಾವಣಗೆರೆ: ಗಣೇಶ ಹಬ್ಬಗಳಲ್ಲಿ ಅನಗತ್ಯ ಗಲಾಟೆ ಹಾಗೂ ರಾತ್ರಿ ವೇಳೆಯ ಅತಿಯಾದ ಶಬ್ದ ಸಂಸ್ಕೃತಿಯಲ್ಲ. ನಾಡಿನ ಸಂಸ್ಕೃತಿಯನ್ನು ಎತ್ತಿಹಿಡಿಯುವ ಕಲಾತಂಡಗಳಿಗೆ ಆದ್ಯತೆ ನೀಡಲಾಗುವುದು. ಆಯೋಜಕರು ಒಂದು ವಾರ ಮುಂಚಿತವಾಗಿ ಮನವಿ ಸಲ್ಲಿಸಿದರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ರಿಯಾಯಿತಿ ದರದಲ್ಲಿ ಕಲಾತಂಡಗಳ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಎಂ. ಗಂಗಾಧರ ಸ್ವಾಮಿ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ತುಂಗಭದ್ರಾ ಸಭಾಂಗಣದಲ್ಲಿ ಗೌರಿ ಗಣೇಶ ಹಬ್ಬದ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ನಾಗರಿಕ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now

ಈ ಬಾರಿ ತೀವ್ರ ಬರದ ಪರಿಸ್ಥಿತಿ ಇರುವುದರಿಂದ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ ನೀರಿನ ಅಭಾವವಿದೆ. ವಿಶೇಷವಾಗಿ ಕುಡಿಯುವ ನೀರಿನ ಯೋಜನೆಗಾಗಿ ಬಳಸುವ ಕೆರೆಗಳಲ್ಲಿ ಮೂರ್ತಿ ವಿಸರ್ಜನೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆಯೋಜಕರು ಮುಂಚಿತವಾಗಿ ಮಾಹಿತಿ ನೀಡಿದರೆ, ಪಾಲಿಕೆ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ವಿಸರ್ಜನೆಗೆ ಪರ್ಯಾಯ ನೀರಿನ ತೊಟ್ಟಿಗಳು ಹಾಗೂ ವಾಹನಗಳ ವ್ಯವಸ್ಥೆ ಮಾಡಲಾಗುವುದು ಮತ್ತು ದೊಡ್ಡ ಗಣಪತಿ ವಿಸರ್ಜನೆ ಮತ್ತು ಮೆರವಣಿಗೆ ನಡೆಯುವ ದಿನಗಳಲ್ಲಿ ತುರ್ತು ಆರೋಗ್ಯ ಸೇವೆಗಾಗಿ ಜಿಲ್ಲಾ ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗುವುದು. ಅಗತ್ಯವಿರುವ ಮಾರ್ಗಗಳಲ್ಲಿ ಕೆಎಸ್‍ಆರ್‍ಟಿಸಿ ನಗರ ಸಾರಿಗೆ ಬಸ್‍ಗಳ ಸೇವೆಯನ್ನು ರಾತ್ರಿ 12 ಗಂಟೆಯವರೆಗೂ ವಿಸ್ತರಿಸಲಾಗುವುದು ಎಂದರು.

ಟ್ರಾಫಿಕ್ ಹಾಗೂ ಫುಟ್‍ಪಾತ್ ತೆರವು:

ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗದಂತೆ ಫುಟ್‍ಪಾತ್ ಆಕ್ರಮಣ ತೆರವುಗೊಳಿಸಲು ಹಾಗೂ ಸುಗಮ ಸಂಚಾರಕ್ಕೆ ಆಟೋ ಚಾಲಕರಿಗೆ ಅಗತ್ಯ ಸೂಚನೆ ನೀಡಲು ಪೊಲೀಸರಿಗೆ ನಿರ್ದೇಶಿಸಲಾಗಿದೆ. ಹಾಗೂ ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ಭಕ್ತಿಭಾವ ಹಾಗೂ ವಿಜೃಂಭಣೆಯಿಂದ ಹಬ್ಬವನ್ನು ಆಚರಿಸಲು ಸಾರ್ವಜನಿಕರಲ್ಲಿ ಮನವಿ ಮಾಡಿದರು.

Share

Leave a comment

Leave a Reply

Your email address will not be published. Required fields are marked *

Related Articles

ದಾವಣಗೆರೆಯ ಬಹುತೇಕ ವಾರ್ಡ್ ಗಳ ಗಣೇಶ ವಿಗ್ರಹಗಳ ತಾತ್ಕಾಲಿಕ ವಿಸರ್ಜನಾ ವ್ಯವಸ್ಥೆಗೆ ನಿಗದಿಪಡಿಸಿರುವ ಸ್ಥಳದ ಕಂಪ್ಲೀಟ್ ಡೀಟೈಲ್ಸ್!

ದಾವಣಗೆರೆ: ಸೆಪ್ಟೆಂಬರ್ 14, 16 ಮತ್ತು 18 ರಂದು  ಶ್ರೀ ಗಣೇಶ ವಿಗ್ರಹಗಳ ತಾತ್ಕಾಲಿಕ ವಿಸರ್ಜನಾ...

5 ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೆ ಒತ್ತಾಯಿಸಿ ದಾವಣಗೆರೆಯಲ್ಲಿ ಬ್ಯಾಂಕ್ ಉದ್ಯೋಗಿಗಳ ಮುಷ್ಕರ!

ದಾವಣಗೆರೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಐದು ದಿನಗಳ ಬ್ಯಾಕಿಂಗ್ ವ್ಯವಸ್ಥೆ ಜಾರಿಗೆ ಒತ್ತಾಯಿಸಿ ಬ್ಯಾಂಕ್...

ಸಚಿವರ ಕುರ್ಚಿಗಿಂತ ಕಾರ್ಮಿಕರ ಸಾಲೇ ದೊಡ್ಡದು:  ವಿಧಾನಸೌಧದ ಕಾರ್ಮಿಕರೊಂದಿಗೆ ಸಹಪಂಕ್ತಿ ಭೋಜನ ಸವಿದ ಸಚಿವ, ಮಾಯಕೊಂಡ ಶಾಸಕ ಕೆ. ಎಸ್.  ಬಸವಂತಪ್ಪ! 

ದಾವಣಗೆರೆ: ಅಧಿಕಾರದ ಉನ್ನತ ಸ್ಥಾನದಲ್ಲಿದ್ದರೂ ಸಾಮಾನ್ಯರೊಂದಿಗೆ ಬೆರೆತು, ಅವರೊಂದಿಗೆ ಕುಳಿತು ಊಟ ಮಾಡುವ ಸರಳತೆ ರಾಜಕಾರಣದಲ್ಲಿ...

ದಾವಣಗೆರೆ ಗಣೇಶೋತ್ಸವಕ್ಕೆ ಬಿಗಿ ಪೊಲೀಸ್ ಭದ್ರತೆ, ಹಳೆಯ ಮಾರ್ಗಗಳಲ್ಲೇ ಮೆರವಣಿಗೆ ಕಡ್ಡಾಯ: ಗಲಾಟೆ ಮಾಡಿದ್ರೆ ಜೈಲು ಖಚಿತ!

ದಾವಣಗೆರೆ: ಗಣೇಶೋತ್ಸವವು ಭಾರತೀಯ ಸಂಸ್ಕೃತಿ ಮತ್ತು ಏಕತೆಯ ಪ್ರತೀಕವಾಗಿದ್ದು, ಪ್ರತಿಯೊಬ್ಬರೂ ಶಾಂತಿ ಹಾಗೂ ಸೌಹಾರ್ದತೆಯಿಂದ ಹಬ್ಬವನ್ನು...

ಫಾಲೋ
ಮಾಡಿ