Home ದಾವಣಗೆರೆ ಸೆ.16ಕ್ಕೆ ದಾವಣಗೆರೆ ಜಿಲ್ಲಾಧಿಕಾರಿ ಕಚೇರಿ ಸುತ್ತ 1 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಜಿ.ಎಂ. ಗಂಗಾಧರಸ್ವಾಮಿ ಆದೇಶ ಹೊರಡಿಸಿದ್ಯಾಕೆ?
ದಾವಣಗೆರೆ

ಸೆ.16ಕ್ಕೆ ದಾವಣಗೆರೆ ಜಿಲ್ಲಾಧಿಕಾರಿ ಕಚೇರಿ ಸುತ್ತ 1 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಜಿ.ಎಂ. ಗಂಗಾಧರಸ್ವಾಮಿ ಆದೇಶ ಹೊರಡಿಸಿದ್ಯಾಕೆ?

Share
ದಾವಣಗೆರೆ
Share

ದಾವಣಗೆರೆ: ಭದ್ರಾ ನಾಲೆಗೆ ನೀರು ಹರಿಸುವಂತೆ ಆಗ್ರಹಿಸಿ ಭದ್ರಾ ಅಚ್ಚುಕಟ್ಟು ಭಾಗದ ರೈತರು ಜಿಲ್ಲಾಧಿಕಾರಿಗಳ ಕಚೇರಿ ಮುತ್ತಿಗೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕ ಹಿತದೃಷ್ಟಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಸೆ. 16 ರಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಡಿಸಿ ಕಚೇರಿ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿ ಸುತ್ತಮುತ್ತಲಿನ 1 ಕಿ.ಮೀ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) 2023ರ ಕಲಂ 163 ರಡಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಆದೇಶ ಹೊರಡಿಸಿದ್ದಾರೆ.

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು  ಭದ್ರಾ ಅಚ್ಚುಕಟ್ಟು ಪ್ರದೇಶದ ಕಾರಿಗನೂರು, ಮುಕ್ತನಹಳ್ಳಿ, ಕತ್ತಲಗೆರೆ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ರೈತರು ಸುಮಾರು 80 ರಿಂದ 100 ಟ್ರ್ಯಾಕ್ಟರ್‌ಗಳಲ್ಲಿ ಆಗಮಿಸಿ, ಸೆಪ್ಟೆಂಬರ್ 16 ರಂದು ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಅನಿರ್ದಿಷ್ಟಾವಧಿ ಪ್ರತಿಭಟನಾ ಧರಣಿ ನಡೆಸಲು ತೀರ್ಮಾನಿಸಿರುವ ಕುರಿತು ಪೊಲೀಸ್ ಅಧೀಕ್ಷಕರು ವರದಿ ಸಲ್ಲಿಸಿದ್ದರು.

ಈ ಪ್ರತಿಭಟನೆಯಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಹಾಗೂ ಕಾನೂನು ಸುವ್ಯವಸ್ಥೆಗೆ ಭಂಗ ಬರದಂತೆ ತಡೆಯಲು ಈ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. ಸದರಿ ನಿಷೇಧಾಜ್ಞೆ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಡಿಸಿ ಸೂಚಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles

ಕಂದಾಯ ಇಲಾಖೆ ನೇಮಕಾತಿ ಪರೀಕ್ಷೆ: ಪಾರದರ್ಶಕತೆ ಹಾಗೂ ಬಿಗಿ ಭದ್ರತೆಯೊಂದಿಗೆ ಪರೀಕ್ಷೆ ನಡೆಸಲು ಕಟ್ಟುನಿಟ್ಟಿನ ಸೂಚನೆ

ದಾವಣಗೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಅಕ್ಟೋಬರ್ 2 ರಂದು ನಡೆಯುವ ಭೂಮಾಪಕರ ಹುದ್ದೆಗಳ ನೇರ ನೇಮಕಾತಿ...

ದಾವಣಗೆರೆ ಪಾಲಿಕೆಯಲ್ಲಿ ಇ-ಸ್ವತ್ತು ನಮೂನೆ-2ರಲ್ಲಿನ ಲೋಪದೋಷಗಳ ತ್ವರಿತವಾಗಿ ತಿದ್ದುಪಡಿ ಮಾಡಿಕೊಡುವಂತೆ ಒತ್ತಾಯಿಸಿ ಮನವಿ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರು ತಮ್ಮ ಮನೆ ಹಾಗೂ ನಿವೇಶನಗಳಿಗೆ ಸಂಬಂಧಿಸಿದ ಇ-ಸ್ವತ್ತು...

ರೇಷನ್ ಕಾರ್ಡ್, ಮತದಾನದ ಹಕ್ಕು ರದ್ದಾಗುವ ಭೀತಿ: ಎಸ್‌ಐಆರ್ ವಿರುದ್ಧ ಶಾಸಕ ಸಮರ್ಥ್ ಶಾಮನೂರು ಕಿಡಿ

ದಾವಣಗೆರೆ: ಎಸ್‌ ಐಆರ್‌ ಪ್ರಕ್ರಿಯೆಯಿಂದ ಜನಸಾಮಾನ್ಯರಲ್ಲಿ ಆತಂಕ ಮತ್ತು ಭಯದ ವಾತಾವರಣ ನಿರ್ಮಾಣವಾಗಿದೆ. ಚುನಾವಣಾ ಅಧಿಕಾರಿಗಳು...

ಪ್ರಜಾಪ್ರಭುತ್ವ ರಕ್ಷಣೆಗೆ ಹೋರಾಟ ನಿರಂತರ; ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ...

ಫಾಲೋ
ಮಾಡಿ