Home ದಾವಣಗೆರೆ ದಾವಣಗೆರೆ ಪಾಲಿಕೆಯಲ್ಲಿ ಇ-ಸ್ವತ್ತು ನಮೂನೆ-2ರಲ್ಲಿನ ಲೋಪದೋಷಗಳ ತ್ವರಿತವಾಗಿ ತಿದ್ದುಪಡಿ ಮಾಡಿಕೊಡುವಂತೆ ಒತ್ತಾಯಿಸಿ ಮನವಿ
ದಾವಣಗೆರೆ

ದಾವಣಗೆರೆ ಪಾಲಿಕೆಯಲ್ಲಿ ಇ-ಸ್ವತ್ತು ನಮೂನೆ-2ರಲ್ಲಿನ ಲೋಪದೋಷಗಳ ತ್ವರಿತವಾಗಿ ತಿದ್ದುಪಡಿ ಮಾಡಿಕೊಡುವಂತೆ ಒತ್ತಾಯಿಸಿ ಮನವಿ

Share
ದಾವಣಗೆರೆ
Share

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರು ತಮ್ಮ ಮನೆ ಹಾಗೂ ನಿವೇಶನಗಳಿಗೆ ಸಂಬಂಧಿಸಿದ ಇ-ಸ್ವತ್ತು ನಮೂನೆ-2 ಪಡೆಯುವ ಸಂದರ್ಭದಲ್ಲಿ ಹಾಗೂ ಈಗಾಗಲೇ ನೀಡಲಾಗಿರುವ ಇ-ಸ್ವತ್ತು ದಾಖಲೆಗಳಲ್ಲಿರುವ ತಪ್ಪುಗಳನ್ನು ತಿದ್ದುಪಡಿ ಮಾಡಿಸಿಕೊಳ್ಳುವ ಸಂದರ್ಭದಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕೂಡಲೇ ಈ ಸಮಸ್ಯೆ ಪರಿಹರಿಸಬೇಕು ಎಂದು ಮಹಾನಗರ ಪಾಲಿಕೆ ಮಾಜಿ ಸದಸ್ಯ ಶಿವನಗೌಡ ಟಿ. ಪಾಟೀಲ್ ನೇತೃತ್ವದಲ್ಲಿ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

ಇ-ಸ್ವತ್ತು ದಾಖಲೆಗಳಲ್ಲಿ ವಿಳಾಸ, ತಂದೆಯ ಹೆಸರು, ಆಸ್ತಿಯ ಅಳತೆ, ಚೆಕ್ಕುಬಂದಿ ಸೇರಿದಂತೆ ವಿವಿಧ ಮಾಹಿತಿಗಳಲ್ಲಿ ಲೋಪದೋಷಗಳು ಕಂಡುಬರುತ್ತಿವೆ. ಇಂತಹ ದೋಷಗಳು ಆಸ್ತಿ ಮಾರಾಟದ ಸಂದರ್ಭದಲ್ಲಿ ನೊಂದಣಿ ಇಲಾಖೆಯಲ್ಲಿ
ಹಾಗೂ ಬ್ಯಾಂಕ್‌ಗಳಿಂದ ಸಾಲ ಪಡೆಯುವಾಗ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿವೆ. ದಾಖಲೆಗಳಲ್ಲಿನ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಸಾರ್ವಜನಿಕರು ಪಾಲಿಕೆ ಕಚೇರಿಗೆ ಪದೇಪದೇ ಅಲೆದಾಡಬೇಕಾಗುತ್ತಿದ್ದು, ಇದರಿಂದ ಅವರ ಸಮಯ, ಹಣ ಹಾಗೂ ಶ್ರಮ ವ್ಯರ್ಥವಾಗುತ್ತಿದೆ. ಸಾರ್ವಜನಿಕರ ತಪ್ಪಿಲ್ಲದಿದ್ದರೂ ದಾಖಲೆಗಳಲ್ಲಿನ ಲೋಪದೋಷಗಳಿಂದ ಅವರು ತೊಂದರೆ ಅನುಭವಿಸುವಂತಾಗಿದೆ ಎಂದು ತಿಳಿಸಲಾಗಿದೆ.

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now

ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಇ-ಸ್ವತ್ತು ದಾಖಲೆಗಳಲ್ಲಿನ ಲೋಪದೋಷಗಳನ್ನು ತ್ವರಿತವಾಗಿ ತಿದ್ದುಪಡಿ ಮಾಡಲು ಸರಳ ಮತ್ತು ಪಾರದರ್ಶಕ ವ್ಯವಸ್ಥೆ ಕಲ್ಪಿಸಬೇಕು. ಈಗಾಗಲೇ ಸಲ್ಲಿಕೆಯಾಗಿರುವ ಬಾಕಿ ತಿದ್ದುಪಡಿ ಅರ್ಜಿಗಳನ್ನು
ಶೀಘ್ರವಾಗಿ ವಿಲೇವಾರಿ ಮಾಡಬೇಕು. ಸಾರ್ವಜನಿಕರು ಪದೇಪದೇ ಪಾಲಿಕೆ ಕಚೇರಿಗೆ ಅಲೆದಾಡದಂತೆ ನಿಗದಿತ ಅವಧಿಯಲ್ಲಿ ತಿದ್ದುಪಡಿ ಮಾಡಿಕೊಡುವ ವ್ಯವಸ್ಥೆ ಜಾರಿಗೆ ತರಬೇಕು. ತಿದ್ದುಪಡಿ ಪ್ರಕ್ರಿಯೆ ಹಾಗೂ ಅರ್ಜಿಯ ಸ್ಥಿತಿಗತಿ ಕುರಿತು ಸಾರ್ವಜನಿಕರಿಗೆ
ಸ್ಪಷ್ಟ ಮಾಹಿತಿ ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರ ಹಿತದೃಷ್ಟಿಯಿಂದ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಿ, ಇ-ಸ್ವತ್ತು ತಿದ್ದುಪಡಿ ಪ್ರಕ್ರಿಯೆಯನ್ನು ಸರಳಗೊಳಿಸಬೇಕೆಂದು ಮನವಿಯಲ್ಲಿ ವಿನಂತಿಸಲಾಗಿದೆ.

ಮನವಿ ಸಲ್ಲಿಸುವ ವೇಳೆ ಸಾಮಾಜಿಕ ಕಾರ್ಯಕರ್ತ ನಾಗರಾಜ್ ಸುರ್ವೆ, ಲಿಂಗರಾಜ್ ಯಾದವ್, ಹರೀಶ್ ಶಾಮನೂರು, ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles

ಕಂದಾಯ ಇಲಾಖೆ ನೇಮಕಾತಿ ಪರೀಕ್ಷೆ: ಪಾರದರ್ಶಕತೆ ಹಾಗೂ ಬಿಗಿ ಭದ್ರತೆಯೊಂದಿಗೆ ಪರೀಕ್ಷೆ ನಡೆಸಲು ಕಟ್ಟುನಿಟ್ಟಿನ ಸೂಚನೆ

ದಾವಣಗೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಅಕ್ಟೋಬರ್ 2 ರಂದು ನಡೆಯುವ ಭೂಮಾಪಕರ ಹುದ್ದೆಗಳ ನೇರ ನೇಮಕಾತಿ...

ರೇಷನ್ ಕಾರ್ಡ್, ಮತದಾನದ ಹಕ್ಕು ರದ್ದಾಗುವ ಭೀತಿ: ಎಸ್‌ಐಆರ್ ವಿರುದ್ಧ ಶಾಸಕ ಸಮರ್ಥ್ ಶಾಮನೂರು ಕಿಡಿ

ದಾವಣಗೆರೆ: ಎಸ್‌ ಐಆರ್‌ ಪ್ರಕ್ರಿಯೆಯಿಂದ ಜನಸಾಮಾನ್ಯರಲ್ಲಿ ಆತಂಕ ಮತ್ತು ಭಯದ ವಾತಾವರಣ ನಿರ್ಮಾಣವಾಗಿದೆ. ಚುನಾವಣಾ ಅಧಿಕಾರಿಗಳು...

ಪ್ರಜಾಪ್ರಭುತ್ವ ರಕ್ಷಣೆಗೆ ಹೋರಾಟ ನಿರಂತರ; ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ...

ದಾವಣಗೆರೆ ನಗರದ ಜನರೇ ಗಮನಿಸಿ: ಸೆ.26ರ ನಾಳೆ  ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

ದಾವಣಗೆರೆ: ನಗರ ಉಪವಿಭಾಗ-2 ರ ವ್ಯಾಪ್ತಿಯ 66/11 ಕೆವಿ ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ...

ಫಾಲೋ
ಮಾಡಿ