ದಾವಣಗೆರೆ: ಚನ್ನಗಿರಿ ತಾಲೂಕಿನ ನಲ್ಲೂರು ಬಳಿ ಇರುವ ಅಸ್ತಾಪನಹಳ್ಳಿಯಲ್ಲಿ ಅಮಾನವೀಯ ಘಟನೆ ನಡೆದಿರುವ ಬಗ್ಗೆ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಬ್ಬರು ಬಾಲಕರನ್ನು ಅಡಿಕೆ ಮರಕ್ಕೆ ಕಟ್ಟಿ ಹಲ್ಲೆ ಮಾಡಿ ಗುಪ್ತಾಂಗಗಳಿಗೆ ಕೆಂಪು ಇರುವೆ ಬಿಟ್ಟು ಚಿತ್ರಹಿಂಸೆ ನೀಡಿರುವ ಆರೋಪ ಕೇಳಿ ಬಂದಿದೆ.
ಏಪ್ರಿಲ್ 4ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಚಿತ್ರಹಿಂಸೆ ನೀಡಿರುವ ವೀಡಿಯೊ ಜಾಲತಾಣದಲ್ಲಿ ವೈರಲ್ ಆಗಿದೆ. ಪೊಲೀಸರು ಒಟ್ಟು 9 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ಸುಭಾಷ್ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಉಳಿದವರಿಗಾಗಿ ಹುಡುಕಾಟ ನಡೆಸಿದ್ದಾರೆ. ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಹಕ್ಕಿಪಿಕ್ಕಿ ಸಮುದಾಯದ ಬಾಲಕರ ಮೇಲೆ ಅದೇ ಜನಾಂಗದ ಹತ್ತು ಯುವಕರು ಹಲ್ಲೆ ಮಾಡಿದ್ದಾರೆ ಎಂದು ದೂರಲಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ದಾವಣಗೆರೆಲೈವ್ gmail
» Whatsapp Number
95903247228