ದಾವಣಗೆರೆ: ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜು ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಯನ್ನು ಬಿಜೆಪಿಯವರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪಾಕಿಸ್ತಾನದ ವಿರುದ್ಧ ಯುದ್ಧ ಅನಿವಾರ್ಯವಲ್ಲ ಎಂಬ ಹೇಳಿಕೆ ಮಾಧ್ಯಮಗಳ ಸೃಷ್ಟಿಯಾಗಿದ್ದು, ಮುಖ್ಯಮಂತ್ರಿಗಳು ಅಂತಹದ್ದೇನೂ ಹೇಳಿಲ್ಲ. ಸಂದರ್ಭಕ್ಕೆ ತಕ್ಕಂತೆ ಕ್ರಮ ಕೈಗೊಳ್ಳಬೇಕು, ಯುದ್ಧದ ಅಗತ್ಯ ಬಂದರೆ ಎದುರಿಸೋಣ ಎಂದಿದ್ದಾರೆ. ಆದರೆ, ಬಿಜೆಪಿಯವರು ಈ ಹೇಳಿಕೆಯನ್ನು ತಿರುಚಿ, ಜನರಿಗೆ ತಪ್ಪು ಸಂದೇಶ ರವಾನಿಸುತ್ತಿದ್ದಾರೆ” ಎಂದು ಆರೋಪಿಸಿದರು.
ಜಾತಿ ಜನಗಣತಿ ವರದಿಯ ಕುರಿತು ಮಾತನಾಡಿದ ಅವರು, “ರಾಜ್ಯದಲ್ಲಿ ಸಾದು ಲಿಂಗಾಯತರ ಸಂಖ್ಯೆಯನ್ನು ಕೇವಲ ೬೦ ಸಾವಿರ ಎಂದು ತೋರಿಸಲಾಗಿದೆ. ಆದರೆ, ನನ್ನ ಮತಕ್ಷೇತ್ರದಲ್ಲೇ ಸುಮಾರು ೬೦ ಸಾವಿರ ಸಾದು ಲಿಂಗಾಯತರು ಇದ್ದಾರೆ. ಈ ಹಿನ್ನೆಲೆಯಲ್ಲಿ ನಾನು ಸ್ವತಃ ನನ್ನ ಕ್ಷೇತ್ರದಲ್ಲಿ ಜಾತಿ ಗಣತಿ ಸರ್ವೆ ನಡೆಸುತ್ತಿದ್ದೇನೆ. ಪ್ರತಿ ಗ್ರಾಮದ ಮತದಾರರ ಪಟ್ಟಿಯ ಆಧಾರದ ಮೇಲೆ ಈ ಸರ್ವೆ ನಡೆಯುತ್ತಿದೆ” ಎಂದು ಮಾಹಿತಿ ನೀಡಿದರು.
ಮುಖ್ಯಮಂತ್ರಿ ಬದಲಾವಣೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಈ ಬಗ್ಗೆ ಡಿಸೆಂಬರ್ ನಂತರ ಮಾತನಾಡುತ್ತೇನೆ” ಎಂದು ಉತ್ತರಿಸಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ದಾವಣಗೆರೆಲೈವ್ gmail
» Whatsapp Number
95903247228