ದಾವಣಗೆರೆ, ಏ.30: ಜಿಲ್ಲೆಯ ವಿವಿಧ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿಯಿರುವ 110 ಪುರುಷ ಸ್ವಯಂಸೇವಕ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಮೇ 16, 2025ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.
ಅರ್ಜಿಗಳನ್ನು ದಾವಣಗೆರೆಯ ದೇವರಾಜ ಅರಸು ಬಡಾವಣೆಯಲ್ಲಿರುವ ಶಿವ ಪಾರ್ವತಿ ಕಲ್ಯಾಣ ಮಂಟಪದ ಬಳಿಯ ಗೃಹರಕ್ಷಕ ದಳದ ಜಿಲ್ಲಾ ಸಮಾದೇಷ್ಟರ ಕಚೇರಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ಅದೇ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
ಖಾಲಿ ಹುದ್ದೆಗಳ ವಿವರ
- ಹರಿಹರ: 19
- ಮಲೇಬೆನ್ನೂರು: 1
- ಹೊನ್ನಾಳಿ: 7
- ನ್ಯಾಮತಿ: 14
- ಚನ್ನಗಿರಿ: 25
- ಸಂತೇಬೆನ್ನೂರು: 6
- ಜಗಳೂರು: 4
- ಬಿಳಿಚೋಡು: 22
- ಬಸವನಕೋಟೆ: 12
ಈ ಮಾಹಿತಿಯನ್ನು ಗೃಹರಕ್ಷಕ ದಳದ ಸಮಾದೇಷ್ಟರು ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ದಾವಣಗೆರೆಲೈವ್ gmail
» Whatsapp Number
95903247228