Davanagere Today News | Kannada News | 12-02-2023
Davangere: ಜಿಲ್ಲೆಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಭೀಕರ ಅಪಘಾತ ಪ್ರಕರಣಗಳಲ್ಲಿ ಇಬ್ಬರು ಮೃತಪಟ್ಟಿದ್ದು, ಒಬ್ಬ ಗಾಯಗೊಂಡಿದ್ದಾನೆ.
ಚನ್ನಗಿರಿ ತಾಲೂಕಿನ ಕಣಿವೆ ಬಿಳಚಿ ಸಮೀಪದ
ಸೂಳೆಕೆರೆ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಒಬ್ಬರು ಮೃತಪಟ್ಟು, ಇನ್ನೂಬ್ಬರಿಗೆ ಗಾಯವಾಗಿವೆ.
ಮಂಜಪ್ಪ (50) ಮೃತ ಮೃತ ದುರ್ದೈವಿ. ರಾಮಪ್ಪ ಎಂಬಾತ ಗಾಯಗೊಂಡಿದ್ದಾನೆ. ಬಸವಾಪಟ್ಟಣ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ತೋಳಹುಣಸೆ ಬಳಿ ಬೈಕ್ ಡಿಕ್ಕಿ
ದಾವಣಗೆರೆ ಸಮೀಪದ ತೋಳಹುಣಸೆ ಬಳಿಯ ಚನ್ನಗಿರಿ ರಸ್ತೆಯಲ್ಲಿ ಹಿಂಬದಿಯಿಂದ ಬಂದ ಬೈಕ್ ಡಿಕ್ಕಿ ಹೊಡೆದು ಒಬ್ಬರು ಮೃತಪಟ್ಟಿದ್ದಾರೆ. ತಾಲ್ಲೂಕಿನ ದ್ಯಾಮೇನಹಳ್ಳಿಯ ಪವನ್(30) ಮೃತರು.
ಕೆಲಸಕ್ಕೆ ಹೋಗುವ ವೇಳೆ ಮಹಾಂತೇಶ್ ಎಂಬಾತ ಹಿಂದಿನಿಂದ ಬಂದು ಬೈಕ್ ಡಿಕ್ಕಿ ಪಡಿಸಿದ್ದಾನೆ. ಆಸ್ಪತ್ರೆಗೆ ಕರೆದುಕೊಂಡು ಬರುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ದಾವಣಗೆರೆಲೈವ್ gmail
» Whatsapp Number
95903247228