ದಾವಣಗೆರೆ: ಕೆಲವರು ಬಸವಣ್ಣನವರನ್ನು ಗುತ್ತಿಗೆ ಪಡೆದವರಂತೆ ಮಾತನಾಡುತ್ತಾರೆ. ವೀರಶೈವ, ಲಿಂಗಾಯತ ಬೇರೆ ಬೇರೆ ಎಂದು ಬೆಂಕಿ ಹಚ್ಚುತ್ತಿದ್ದಾರೆ. ಆದರೆ ಸನಾತನ ಧರ್ಮ ಉಳಿದರೆ ಮಾತ್ರ ಭಾರತ ಉಳಿಯುತ್ತದೆ. ಇಸ್ಲಾಂ ಹಾಗೂ ಲಿಂಗಾಯತ ಸಮಾನ ಧರ್ಮ ಅನ್ನುವವರು ಪರಸ್ಪರ ಮದುವೆ ಮಾಡಿಕೊಳ್ಳುತ್ತೀರಾ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿದರು.
ದೇವರಬೆಳಕೆರೆಯಲ್ಲಿ ಶುಕ್ರವಾರ ರಾತ್ರಿ ನಡೆದ ಶ್ರೀಬಸವೇಶ್ವರರ ಉತ್ಸವ ಹಾಗೂ ಜಯಂತ್ಯುತ್ಸವ ಉದ್ಘಾಟಿಸಿ, ಮಾತನಾಡಿದರು. ಮೂಢನಂಬಿಕೆ ಹಾಗೂ ಅಸ್ಪೃಶ್ಯತೆ ವಿರುದ್ಧ ಬಸವಣ್ಣ ನವರು ಹೋರಾಟ ಮಾಡಿದರೆ ಹೊರತು ಹಿಂದೂ ಧರ್ಮದ ವಿರುದ್ಧ ಅಲ್ಲ. ಬಸವಣ್ಣನವರನ್ನು ತಮ್ಮ ಕಪಿಮುಷ್ಠಿಯಲ್ಲಿಟ್ಟುಕೊಳ್ಳಲು ಹಿಂದೂ ಧರ್ಮದ ವಿರುದ್ದ ಹೋರಾಡಿದರು ಎಂದು ತಪ್ಪಾಗಿ ಅರ್ಥೈಸುತ್ತಿದ್ದಾರೆ. ಬಸವಣ್ಣನವರ ವಚನದಲ್ಲಿನ ಕೂಡಲ ಸಂಗಮದೇವ ಎಂದರೆ ಶಿವ ಎಂದರು.
ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಶ್ರೀಬಸವಮೃತ್ಯುಂಜಯ ಸ್ವಾಮೀಜಿ, ಹೆಬ್ಬಾಳು ವಿರಕ್ತಮಠದ ಶ್ರೀಮಹಾಂತ ರುದ್ರೇಶ್ವರ ಸ್ವಾಮೀಜಿ, ದಾವಣಗೆರೆ ವಿರಕ್ತಮಠದ ಶ್ರೀಬಸವಪ್ರಭು ಸ್ವಾಮೀಜಿ, ಮಾಜಿ ಶಾಸಕ ಎಚ್‌ಎಸ್ ಶಿವಶಂಕರ್, ವಿನಯ್‌ಕುಮಾರ್, ಶಿವಕುಮಾರ್, ವೀರೇಶ್, ಕರಿಬಸಪ್ಪ, ನಾನಾ ಮಠದ ಶ್ರೀಗಳು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ದಾವಣಗೆರೆಲೈವ್ gmail
» Whatsapp Number
95903247228