ದಾವಣಗೆರೆ ಲೈವ್, ದಾವಣಗೆರೆ: ಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ನೀರಿಲ್ಲದೆ ಭತ್ತ ಪೈರುಗಳು ಒಣಗುವ ಹಂತಕ್ಕೆ ತಲುಪಿಸಿದ್ದು, ರೈತರಿಗೆ ಸಂಕಷ್ಟ ಎದುರಾಗಿದೆ. ಭದ್ರಾ ಅಚ್ಚುಕಟ್ಟು ಪ್ರದೇಶದ ಕೊನೆಯ ಭಾಗದ ರೈತರಿಗೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಅವರು ಭತ್ತದ ಗದ್ದೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹಲವು ದಿನಗಳಿಂದ ಭದ್ರಾ ಅಚ್ಚುಕಟ್ಟು ಪ್ರದೇಶದ ಕೊನೆಯ ಭಾಗದ ಜಮೀನುಗಳಿಗೆ ನೀರಿಲ್ಲದೆ ನಾಟಿ ಮಾಡಿದ್ದ ಭತ್ತದ ಪೈರು ಒಣಗುತ್ತಿವೆ. ಇದರಿಂದ ರೈತರು ಸಮಸ್ಯೆಗೆ ಸಿಲುಕಿದ್ದಾರೆ. ಕೂಡಲೇ ಭದ್ರಾ ಜಲಾಶಯದಿಂದ ನೀರು ಹರಿಸಿ ರೈತರ ನೆರವಿಗೆ ಬರಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡಸಲಾಗಿತ್ತು. ಬುಧವಾರ ಭತ್ತದ ಗದ್ದೆಗಳಿಗೆ ಕಾಡಾ ಅಧ್ಯಕ್ಷ್ಷೆ ಪವಿತ್ರಾ ರಾಮಯ್ಯ ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ರೈತರಿಗೆ ಭರವಸೆ ನೀಡಿತು.
ಅಧಿಕಾರಿಗಳಿಗೆ ಕಾಡಾ ಅಧ್ಯಕ್ಷೆ ತರಾಟೆ
ಭದ್ರಾ ಜಲಾಶಯದಿಂದ ನೀರು ಹರಿಸುವಲ್ಲಿ ಅಧಿಕಾರಿಗಳು ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು. ನಾಲ್ಕು ದಿನದೊಳಗೆ ರೈತರಿಗೆ ನೀರು ಪೂರೈಸಿ ಇಲ್ಲದಿದ್ದರೆ ರಾಜೀನಾಮೆ ನೀಡಿ ಮನೆಗೆ ಹೋಗಿ ಎಂದು ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಖಡಕ್ ವಾರ್ನಿಂಗ್ ನೀಡಿದರು.
Leave a comment