Davanagere News Today | Davanagere Accident News
ದಾವಣಗೆರೆ ನಗರದ ಹೊರವಲಯದ ಬೇತೂರ ರಸ್ತೆಯಲ್ಲಿ ಸೋಮವಾರ ಬೆಳಗ್ಗೆ ಖಾಸಗಿ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ದಾವಣಗೆರೆಯಿAದ ಜಗಳೂರಿಗೆ ತೆರಳುತ್ತಿದ್ದ ಬಸ್ ಎಲೆಬೇತೂರು ಬಳಿ ಸೇತುವೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅದೃಷ್ಟವಶಾತ್ ಹೆಚ್ಚಿನ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ, ಆದರೆ ಒಬ್ಬ ಪ್ರಯಾಣಿಕನಿಗೆ ಗಂಭೀರ ಗಾಯಗಳಾಗಿವೆ.
ಸಣ್ಣ ಹಳ್ಳದ ಸೇತುವೆಗೆ ಬಸ್ ಡಿಕ್ಕಿ ಹೊಡೆದು ಪಲ್ಟಿಯಾಗಿ ಈ ಘಟನೆ ನಡೆದಿದೆ. ಸೇತುವೆಯಿಂದ ಬಸ್ ಬಿದ್ದಿದ್ದರೆ ಪರಿಸ್ಥಿತಿ ತೀರಾ ಹದಗೆಡಬಹುದಿತ್ತು, ಇದು ದೊಡ್ಡ ಅನಾಹುತಕ್ಕೆ ಕಾರಣವಾಗಬಹುದಿತ್ತು. ಆದರೆ ಅದೃಷ್ಟವಶಾತ್ ದೊಡ್ಡ ಅಪಾಯ ದೂರಾಗಿದೆ.
ಸ್ಥಳೀಯರು ಪ್ರಯಾಣಿಕರನ್ನು ರಕ್ಷಿಸಿದ್ದು, ಗಾಯಾಳುಗಳನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.