ದಾವಣಗೆರೆ: ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ನಿಗಧಿತ ಮಳೆಯಾಗದೇ ಇರುವುದರಿಂದ ವಿತರಣಾ ನಾಲೆಗಳಿಗೆ ನೀರನ್ನು ಹರಿಸುವ ಮೂಲಕ ಈ ಭಾಗಗಳ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಅಗತ್ಯತೆ ಇರುವುದರಿಂದ ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ನಾಲೆಗಳಿಗೆೆ 15 ದಿವಸ ನೀರು ಹರಿಸಲಾಗುವುದು.
ಭದ್ರಾ ಅಚ್ಚಕಟ್ಟು ವ್ಯಾಪ್ತಿಯ ನಾಲೆಗಳಿಗೆ ಸೆಪ್ಟೆಂಬರ್ 17 ರ ಮಧ್ಯರಾತ್ರಿ 12 ಗಂಟೆಯಿಂದ ಅಕ್ಟೋಬರ್ 2 ರವರೆಗೆ ನೀರನ್ನು ಹರಿಸಲಾಗುವುದು. ಭದ್ರಾ ಅಚ್ಚುಕಟ್ಟು ಪ್ರದೇಶದ ಜನ ಜಾನುವಾರುಗಳ ಕುಡಿಯುವ ನೀರು, ಅಂತರ್ಜಲ ವೃದ್ಧಿ, ಕೆರೆ ಕಟ್ಟೆಗಳನ್ನು ತುಂಬಿಸಲು ನೀರು ಹರಿಸಲಾಗುತ್ತದೆ.
ದಾವಣಗೆರೆ ಲೈವ್ WhatsApp Group
ಜಾಯಿನ್ ಆಗಿ
ಹರಿಸುತ್ತಿರುವ ನೀರನ್ನು ಡಿಸೆಂಬರ್ 2026 ರವರೆಗೆ ಜನ ಜಾನುವಾರುಗಳ ಕುಡಿಯುವ ನೀರಿಗೆ ಕೊರತೆಯಾಗದಂತೆ ಸದ್ಬಳಕೆ ಮಾಡಿಕೊಳ್ಳಬೇಕು. ನೀರನ್ನು ಬೆಳೆಗಳಿಗೆ ಉಪಯೋಗಿಸುವಂತಿಲ್ಲ ಮತ್ತು ಅನಧಿಕೃತವಾಗಿ ನೀರೆತ್ತುವಂತಿಲ್ಲ.
ಸಾರ್ವಜನಿಕ ಹಿತದೃಷ್ಟಿಯಿಂದ ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ. ಎಂದು ಕ.ನೀ.ನಿ.ನಿ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.
Leave a comment