ದಾವಣಗೆರೆ: ಭದ್ರಾ ನಾಲೆಗೆ ನೀರು ಹರಿಸುವಂತೆ ಆಗ್ರಹಿಸಿ ಭದ್ರಾ ಅಚ್ಚುಕಟ್ಟು ಭಾಗದ ರೈತರು ಜಿಲ್ಲಾಧಿಕಾರಿಗಳ ಕಚೇರಿ ಮುತ್ತಿಗೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕ ಹಿತದೃಷ್ಟಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಸೆ. 16 ರಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಡಿಸಿ ಕಚೇರಿ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿ ಸುತ್ತಮುತ್ತಲಿನ 1 ಕಿ.ಮೀ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) 2023ರ ಕಲಂ 163 ರಡಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಆದೇಶ ಹೊರಡಿಸಿದ್ದಾರೆ.
ದಾವಣಗೆರೆ ಲೈವ್ WhatsApp Group
ಜಾಯಿನ್ ಆಗಿ
ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ಭದ್ರಾ ಅಚ್ಚುಕಟ್ಟು ಪ್ರದೇಶದ ಕಾರಿಗನೂರು, ಮುಕ್ತನಹಳ್ಳಿ, ಕತ್ತಲಗೆರೆ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ರೈತರು ಸುಮಾರು 80 ರಿಂದ 100 ಟ್ರ್ಯಾಕ್ಟರ್‌ಗಳಲ್ಲಿ ಆಗಮಿಸಿ, ಸೆಪ್ಟೆಂಬರ್ 16 ರಂದು ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಅನಿರ್ದಿಷ್ಟಾವಧಿ ಪ್ರತಿಭಟನಾ ಧರಣಿ ನಡೆಸಲು ತೀರ್ಮಾನಿಸಿರುವ ಕುರಿತು ಪೊಲೀಸ್ ಅಧೀಕ್ಷಕರು ವರದಿ ಸಲ್ಲಿಸಿದ್ದರು.
ಈ ಪ್ರತಿಭಟನೆಯಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಹಾಗೂ ಕಾನೂನು ಸುವ್ಯವಸ್ಥೆಗೆ ಭಂಗ ಬರದಂತೆ ತಡೆಯಲು ಈ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. ಸದರಿ ನಿಷೇಧಾಜ್ಞೆ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಡಿಸಿ ಸೂಚಿಸಿದ್ದಾರೆ.
Leave a comment