Davanagere Today News | Kannada News | 12-02-2023
Davangere: ಕ್ರಿಕೆಟ್ ಮೂಲಕ ದಾವಣಗೆರೆ ಹೆಸರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಹೆಚ್ಚಿಸಿದ ದಾವಣಗೆರೆ ಎಕ್ಸ್‌ಪ್ರೆಸ್ ವಿನಯ್ ಕುಮಾರ್ ಅವರಿಗೆ ಇಂದು ಜನ್ಮ ದಿನದ ಸಂಭ್ರಮ.
ಆರ್. ವಿನಯ್ ಕುಮಾರ್ ಅವರ ಪೂರ್ತಿ ಹೆಸರು ರಂಗನಾಥ್ ವಿನಯ್ ಕುಮಾರ್. ಫೆಬ್ರವರಿ 12ರ 1984ರಲ್ಲಿ ದಾವಣಗೆರೆಯಲ್ಲಿ ಜನಿಸಿದ ವಿನಯ್ ಕುಮಾರ್ ಅವರಿಗೆ ಈಗ 39ರ ಹರಯ. ಬಾಲ್ಯದಲ್ಲಿಯೇ ಕ್ರಿಕೆಟ್ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದ ವಿನಯ್ ಕುಮಾರ್ ಅಂತರಾಷ್ಟ್ರೀಯ ಮಟ್ಟದ ಟೆಸ್ಟ್ , ಏಕದಿನ (ODI) ಮತ್ತು ಟ್ವೆಂಟಿ 20 ಹಂತಗಳಲ್ಲಿ ಭಾರತವನ್ನು ಪ್ರತಿನಿಧಿಸಿ ಬೆಣ್ಣೆ ನಗರಿ ದಾವಣಗೆರೆಯ ಗರಿಮೆ ಹೆಚ್ಚಿಸಿದ್ದಾರೆ.
ಇಂದು ಜನ್ಮದಿನ ಆಚರಿಸಿಕೊಳ್ಳುತ್ತಿರುವ ಖ್ಯಾತ ಕ್ರಿಕೆಟರ್ ದಾವಣಗೆರೆ ಎಕ್ಸ್‌ಪ್ರೆಸ್ ವಿನಯ್ ಕುಮಾರ್ ಗೆ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಶುಭಾಶಯ ಕೋರಿದ್ದಾರೆ.
ದಾವಣಗೆರೆ ಎಕ್ಸ್‌ಪ್ರೆಸ್ ವಿನಯ್ ಕುಮಾರ್ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು 💛❤#HBDVinayKumar #VinayKumar pic.twitter.com/rAwPPz1bxT
— Star Sports Kannada (@StarSportsKan) February 12, 2023
ದಾವಣಗೆರೆ ಎಕ್ಸ್‌ಪ್ರೆಸ್ ವಿನಯ್ ಕುಮಾರ್ ವಿಶೇಷ
ದಾವಣಗೆರೆ ಎಕ್ಸ್‌ಪ್ರೆಸ್ ವಿನಯ್ ಕುಮಾರ್ ಬಲಗೈ ಮಧ್ಯಮ ವೇಗದ ಬೌಲರ್ ಆಗಿದ್ದು, ಕರ್ನಾಟಕಕ್ಕಾಗಿ ದೇಶೀಯ ಕ್ರಿಕೆಟ್ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂಕೋಲ್ಕತ್ತಾ ನೈಟ್ ರೈಡರ್ಸ್‌ಗಾಗಿ ಆಡಿದ್ದಾರೆ .
ವಿನಯ್ ಕುಮಾರ್ 2013-14 ಮತ್ತು 2014-15 ರ ವೇಳೆ ಸತತ ಎರಡು ಬಾರಿ ರಣಜಿ ಟ್ರೋಫಿ ಪ್ರಶಸ್ತಿಗಳನ್ನು ಕರ್ನಾಟಕಕ್ಕೆ ತಂದುಕೊಟ್ಟಿದ್ದಾರೆ. ನವೆಂಬರ್ 2018 ರ ರಣಜಿ ಟ್ರೋಫಿಯಲ್ಲಿ ತಮ್ಮ 100 ನೇ ಪಂದ್ಯದಲ್ಲಿ ಆಡಿದರು. ಫೆಬ್ರವರಿ 2021 ರಲ್ಲಿ, ಕುಮಾರ್ ಎಲ್ಲಾ ರೀತಿಯ ಆಟದಿಂದ ನಿವೃತ್ತಿ ಘೋಷಿಸಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ದಾವಣಗೆರೆಲೈವ್ gmail
» Whatsapp Number
95903247228