Home ದಾವಣಗೆರೆ ದಾವಣಗೆರೆ ಜನರಿಗೆ ಸಿಹಿ ಸುದ್ದಿ: ಹೊರ ಜಿಲ್ಲೆಯ ಡಿಜೆಗೆ ಪ್ರವೇಶವಿಲ್ಲ, 4 ಬಾಕ್ಸ್ ಸಾಮಾನ್ಯ ಧ್ವನಿವರ್ಧಕಗಳ ಬಳಕೆಗೆ ಅವಕಾಶ
ದಾವಣಗೆರೆ

ದಾವಣಗೆರೆ ಜನರಿಗೆ ಸಿಹಿ ಸುದ್ದಿ: ಹೊರ ಜಿಲ್ಲೆಯ ಡಿಜೆಗೆ ಪ್ರವೇಶವಿಲ್ಲ, 4 ಬಾಕ್ಸ್ ಸಾಮಾನ್ಯ ಧ್ವನಿವರ್ಧಕಗಳ ಬಳಕೆಗೆ ಅವಕಾಶ

Share
ದಾವಣಗೆರೆ
Share

ದಾವಣಗೆರೆ: ಜಿಲ್ಲೆಯಾದ್ಯಂತ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಕಾಪಾಡುವ ಹಿತದೃಷ್ಟಿಯಿಂದ ಗಣೇಶ ಮೂರ್ತಿಗಳು ವಿಸರ್ಜನೆಯಾಗುವವರೆಗೆ ಸೌಂಡ್ ಸಿಸ್ಟಂ ಬಳಕೆಗೆ ಸಂಬಂಧಿಸಿದಂತೆ ಷರತ್ತುಗಳಿಗೆಗೊಳಪಟ್ಟು ನಿಯಮಾನುಸಾರ ಎಲ್ಲಾ ಅಗತ್ಯ ಮುನ್ನೆಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಆದೇಶಿಸಿದ್ದಾರೆ.

Noise Pollution (Regulation & Control) Rule-2000 ಶಬ್ದ ಮಾಲಿನ್ಯ ತಡೆ ನಿಯಮಾನುಸಾರ ಧ್ವನಿವರ್ಧಕಗಳ ಶಬ್ದದ ಬಳಕೆಯನ್ನು ಪೊಲೀಸ್ ಇಲಾಖೆಯವರು ಪರಿಶೀಲಿಸಿ ಅನುಮತಿಯನ್ನು ನೀಡಬಹುದು.

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now

ಇತರೆ ಜಿಲ್ಲೆಗಳಿಂದ ಗಣೇಶ ಹಬ್ಬದ ಸಂದರ್ಭದಲ್ಲಿ ಡಿ.ಜೆ ಸಿಸ್ಟಂ ತಂದು ಜಿಲ್ಲೆಯಲ್ಲಿ ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಡಿಜೆ ಸೌಂಡ್ ಸಿಸ್ಟಂ ಮತ್ತು ಹೆಚ್ಚಿನ ಶಬ್ದ ಹೊರಸೂಸುವ ಉಪಕರಣಗಳನ್ನು ಹೊರತು ಪಡಿಸಿ 4 ಬಾಕ್ಸ್ ಸಾಮಾನ್ಯ ಧ್ವನಿ ವರ್ದಕಗಳನ್ನು ಬಳಸಲು ಅನುಮತಿ ನೀಡಲಾಗಿದೆ.

ಡಿ.ಜೆ ಗಳಲ್ಲಿ ಬಳಸಲಾಗುವ ಹೆಚ್ಚಿನ ಶಬ್ದ ಹೊರಸೂಸುವ ಪ್ರೆಸರ್ ಮೖಡ್ಸ್ ಹಾಗೂ ಇತರೆ ಹೆಚ್ಚಿನ ಶಬ್ದಗಳನ್ನು ವಿಶೇಷವಾಗಿ ಹೊರಸೂಸುವ ಉಪಕರಣಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ.

ಮಾನದಂಡಗಳನ್ನು ಡಿ.ಜೆ ಬಳಕೆದಾರರು ಮತ್ತು ಆಯೋಜಕರು ಪಾಲಿಸದೇ ಇದ್ದಲ್ಲಿ ಅಂತಹವರ ವಿರುದ್ಧ ಪೊಲೀಸ್ ಇಲಾಖೆಯವರು ನಿಯಮಾನುಸಾರ ಸೂಕ್ತ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಆದೇಶದಲ್ಲಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles

ಇಂದಿನಿಂದ ಭದ್ರಾ ಬಲದಂಡೆ, ಎಡದಂಡೆ ಮತ್ತು ಗೊಂದಿ ನಾಲೆಯ ವಿತರಣಾ ನಾಲೆಗಳು, ಸಿದ್ದನಾಲೆಗಳ ಮೂಲಕ ನೀರು ಕೆರೆ ಮತ್ತು ಹಳ್ಳಕ್ಕೆ ಬಿಡುಗಡೆ

ದಾವಣಗೆರೆ: ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ನಿಗಧಿತ ಮಳೆಯಾಗದೇ ಇರುವುದರಿಂದ ವಿತರಣಾ ನಾಲೆಗಳಿಗೆ ನೀರನ್ನು ಹರಿಸುವ...

ದಾವಣಗೆರೆಯ ಸಿದ್ಧಗಂಗಾ ಸಂಸ್ಥೆಯಲ್ಲಿ 14 ಅಡಿ ಎತ್ತರದ ಪರಿಸರ ಸ್ನೇಹಿ ಗಣಪ

ದಾವಣಗೆರೆ: ದಾವಣಗೆರೆಯ ಶ್ರೀ ಸಿದ್ಧಗಂಗಾ ಸಂಸ್ಥೆಯಲ್ಲಿ ವಿಶಿಷ್ಠ ರೀತಿಯಲ್ಲಿ ಗಣೇಶ ಚತುರ್ಥಿ ಆಚರಿಸುತ್ತಿರುವುದು ನಗರದ ಮನೆ...

ಎರಡೂವರೆ ದಶಕ ಕಳಂಕರಹಿತ ಆಡಳಿತ ನೀಡಿರುವ ಮೋದಿ ಅವರೇ ಮುಂದೆಯೂ ಪ್ರಧಾನಿಯಾಗಬೇಕು: ಯಶವಂತರಾವ್ ಜಾಧವ್ ಆಶಯ

ದಾವಣಗೆರೆ: ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿ, ದೇಶದ ಪ್ರಧಾನಿಯಾಗಿ 25 ವರ್ಷಗಳ ಕಾಲ ನಡೆಸಿದ...

ದಾವಣಗೆರೆ ಜಿಲ್ಲೆಯಾದ್ಯಂತ ಈ ದಿನಗಳಂದು ಮದ್ಯ ಮಾರಾಟ ಮತ್ತು ಸರಬರಾಜು ನಿಷೇಧ!

ದಾವಣಗೆರೆ: ಗಣೇಶ ಚತುರ್ಥಿ ಅಂಗವಾಗಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಗಣೇಶ ಮೂರ್ತಿಗಳ ವಿಸರ್ಜನೆಯ ವೇಳೆ...

ಫಾಲೋ
ಮಾಡಿ