ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಪ್ರಧಾನ ಮಾಡಲು ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಮಕ್ಕಳ ಕ್ಷೇತ್ರದಲ್ಲಿ ಸಾಧನೆ ಮಾಡಿದ ವ್ಯಕ್ತಿ ಸಂಸ್ಥೆಗಳಿಗೆ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಮಕ್ಕಳ ದಿನಾಚರಣೆ ಕಾರ್ಯಕ್ರಮದಂದು ತಮ್ಮ ಪ್ರಾಣದ ಹಂಗನ್ನು ತೊರೆದು ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ-ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ “ಹೊಯ್ಸಳ” ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಯನ್ನು ನೀಡಲಾಗುವುದು. ಮಕ್ಕಳ ಕಲ್ಯಾಣ ಕ್ಷೇತ್ರಗಳಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.25000/-ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ.1.00ಲಕ್ಷ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
ದಾವಣಗೆರೆ ಲೈವ್ WhatsApp Group
ಜಾಯಿನ್ ಆಗಿ
ಕನಿಷ್ಠ 5 ವರ್ಷ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿ ಹಾಗೂ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಗದಿತ ಅರ್ಜಿ ನಮೂನೆಗಳನ್ನು ಪಡೆದು ಕನ್ನಡ ಭಾμÉಯಲ್ಲಿ ಭರ್ತಿಮಾಡಿ ದ್ವಿ-ಪ್ರತಿಯಲ್ಲಿ ಸೆ.21 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ: 08192-264056 ಇಲ್ಲಿಗೆ ಸಲ್ಲಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
Leave a comment