ದಾವಣಗೆರೆ: ನಗರ ಉಪವಿಭಾಗ-2 ರ ವ್ಯಾಪ್ತಿಯ 66/11 ಕೆವಿ ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್18-ದುರ್ಗಾಂಭಿಕ ಫೀಡರ್ ಮಾರ್ಗದಲ್ಲಿ ತುರ್ತು ಜಲಸಿರಿ ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವುದರಿಂದ ಸೆಪ್ಟೆಂಬರ್ 26 ರಂದು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 3:00 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ವಿದ್ಯುತ್ ನಿಲುಗಡೆಯಾಗುವ ಪ್ರದೇಶಗಳು:
ದಾವಣಗೆರೆ ಲೈವ್ WhatsApp Group
ಜಾಯಿನ್ ಆಗಿ
ಬಾರ್ ಲೈನ್ ರೋಡ್ , ಕಾಡಪ್ಪ ಕಣ, ಕಾಯಿ ಪೇಟೆ , ಎಂ.ಬಿ. ಕೆರೆ , ಹೊಂಡದ ಸರ್ಕಲ್ , ಚಲುವಾದಿಕೇರಿ , ಜಾಲಿ ನಗರ , ಟೀಚರ್ಸ್ ಕಾಲೋನಿ , ಶಿವಾಜಿ ನಗರ ,ದುರ್ಗಾಂಭಿಕ ದೇವಸ್ಥಾನ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ, ಸಂಬಂಧಪಟ್ಟ ಪ್ರದೇಶಗಳ ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಈ ಕಾಮಗಾರಿಗೆ ಸಹಕರಿಸಬೇಕಾಗಿ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
Leave a comment