ದಾವಣಗೆರೆ: ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಪೀಠಾಧಿಪತಿ ಶ್ರೀ ವಚನಾನಂದ ಸ್ವಾಮೀಜಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಸೇರಿದಂತೆ ಇತರೆ ವಿಚಾರಗಳನ್ನಿಟ್ಟುಕೊಂಡು ವಚನಾನಂದ ಸ್ವಾಮೀಜಿಗೆ ನೀಡಿರುವ ನಿರೀಕ್ಷಣಾ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಲಾಗಿದೆ.
ದಾವಣಗೆರೆ ಲೈವ್ WhatsApp Group
ಜಾಯಿನ್ ಆಗಿ
ಮಕ್ಕಳ ಮೇಲಿನ ದೌರ್ಜನ್ಯ ಅತ್ಯಂತ ಅಪರಾಧಿ ಕೃತ್ಯ. ಸಾಕ್ಷ್ಯ ನಾಶ ಮಾಡುವ ಸಂಭವ ಇರುವ ಕಾರಣಕ್ಕೆ ಜಾಮೀನು ರದ್ದು ಕೋರಿ ಸಲ್ಲಿಕೆಯಾಗಿದ್ದ ತಕರಾರು ಅರ್ಜಿಯನ್ನು ದಾವಣಗೆರೆಯ ಪೋಕ್ಸೋ ನ್ಯಾಯಾಲಯ ವಜಾಗೊಳಿಸಿ ಆದೇಶಿಸಿದೆ. ಈ ಮೂಲಕ ವಚನಾನಂದ ಸ್ವಾಮೀಜಿ ಅವರು ನಿರಾಳರಾಗುವಂತೆ ಮಾಡಿದೆ. ನ್ಯಾಯಾಂಗ ಪ್ರಕ್ರಿಯೆಯಲ್ಲಿ ದೊಡ್ಡ ಮಟ್ಟದ ಯಶಸ್ಸು ಶ್ರೀಗಳಿಗೆ ಸಿಕ್ಕಿದಂತಾಗಿದೆ.
ಹರಿಹರದ ಶ್ರೀ ಕ್ಷೇತ್ರ ವೀರಶೈವ ಲಿಂಗಾಯತ ಪಂಚಮಸಾಲಿ ಮಠದಲ್ಲಿದ್ದ ಅಪ್ರಾಪ್ತ ಬಾಲಕರಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಹರಿಹರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿತ್ತು. ಶ್ರೀಗಳು ವಿಚಾರಣೆಗೆ ಗೈರು ಹಾಜರಾಗದೇ ತಪ್ಪದೇ ಹಾಜರಾಗಿದ್ದರು. ಪೊಲೀಸರ ವಿಚಾರಣೆ ಎದುರಿಸಿದ್ದ ಶ್ರೀಗಳು ಪೊಲೀಸರ ಪ್ರಶ್ನೆಗಳಿಗೆ ಉತ್ತರಿಸಿದ್ದರು.
Leave a comment