ದಾವಣಗೆರೆ: ದಾವಣಗೆರೆ ಜಿಲ್ಲಾ ಪಂಚಾಯಿತಿಯ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸಾಹಿತ್ಯ ಎಂ. ಆಲದಕಟ್ಟೆ ಅವರು ಅಧಿಕಾರ ಸ್ವೀಕರಿಸಿದರು.
ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್‌ನ ವಿವಿಧ ವಿಭಾಗಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಆತ್ಮೀಯವಾಗಿ ಶುಭ ಹಾರೈಸಿದರು.
ದಾವಣಗೆರೆ ಲೈವ್ WhatsApp Group
ಜಾಯಿನ್ ಆಗಿ
ಅಧಿಕಾರ ಸ್ವೀಕರಿಸಿದ ಬಳಿಕ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ಸಂಕ್ಷಿಪ್ತವಾಗಿ ಚರ್ಚಿಸಿದ ಅವರು, ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಜನಪರ ಸೇವೆಗಾಗಿ ಎಲ್ಲರೂ ಸಮನ್ವಯದಿಂದ, ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಕರೆ ನೀಡಿದರು.
ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಾರದರ್ಶಕವಾಗಿ, ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಬೇಕು. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸಿ. ಜನರ ಕಷ್ಟಗಳಿಗೆ ಸ್ಪಂದಿಸಿ ಎಂದು ಕಿವಿಮಾತು ಹೇಳಿದರು.
Leave a comment