ದಾವಣಗೆರೆ: ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 210 ನೇರಪಾವತಿ ಪೌರಕಾರ್ಮಿಕರ ಹುದ್ದೆಗಳನ್ನು ಭರ್ತಿ ಮಾಡಲು ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಲ್ಪರ್, ಲೋಡರ್ ಹಾಗೂ ಮ್ಯಾನ್ಯೂಯಲ್ ಸ್ಕ್ಯಾವೆಂಜರ್ ಅವಲಂಬಿತರಿಗೆ ಅರ್ಜಿ ನಮೂನೆಗಳನ್ನು ಮಹಾನಗರಪಾಲಿಕೆಯಿಂದ ವಿತರಿಸಲಾಗಿದೆ.
ಭರ್ತಿ ಮಾಡಿದ ಅರ್ಜಿ ನಮೂನೆಗಳನ್ನು ಸಲ್ಲಿಸಲು ಸೆ.11 ರವರೆಗೆ ಕಾಲಾವಕಾಶ ನೀಡಲಾಗಿದೆ. ಮಹಾನಗರಪಾಲಿಕೆಯಲ್ಲಿ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿರಲಿದೆ. ಹೊರಗುತ್ತಿಗೆಯಡಿ ಕಾರ್ಯನಿರ್ವಹಿಸುತ್ತಿರುವ ಹೆಲ್ಪರ್, ಲೋಡರ್ಗಳ ನೇಮಕಾತಿಗೆ ಅರ್ಹತೆ ಹೊಂದಿದ್ದು, ಯಾವುದೇ ಮಧ್ಯವರ್ತಿಗಳಿಗೆ ಅವಕಾಶ ನೀಡದಂತೆ ಅರ್ಜಿ ನಮೂನೆಗಳನ್ನು ನೇರವಾಗಿ ಅಭ್ಯರ್ಥಿಗಳಿಗೆ ಮಾತ್ರವೇ ವಿತರಿಸಿದ್ದು, ಖುದ್ದಾಗಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ.
ದಾವಣಗೆರೆ ಲೈವ್ WhatsApp Group
ಜಾಯಿನ್ ಆಗಿ
ಯಾವುದೇ ಮಧ್ಯವರ್ತಿಗಳ ಆಮಿಷ, ಹೆದರಿಕೆಗೆ ಒಳಗಾಗದಂತೆ, ಯಾವುದೇ ಹಂತದಲ್ಲಿಯೂ ಯಾರಿಗೂ ಹಣ ನೀಡಬಾರದು. ಹಾಗೂ ನೇಮಕಾತಿ ಮಾಡಿಸುವುದಾಗಿ ಆಸೆ ತೋರಿಸಿ ಹಣ ಯಾಚಿಸಿದಲ್ಲಿ ದೂರು ನೀಡಬಹುದೆಂದು ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್ ತಿಳಿಸಿದ್ದಾರೆ.
Leave a comment