DAVANAGERE NEWS TODAY | KANNADA NEWS | 07-02-2023
Davanagere: ಪೊಲೀಸ್ ಇಲಾಖೆ ಸಂಚಾರ ನಿಯಮ ದಂಡ ವಸೂಲಿ ಕ್ರಮದಲ್ಲಿ ಇ-ಚಲನ್ ಎಂಬ ನೂತನ ವ್ಯವಸ್ಥೆ ಜಾರಿಗೆ ತಂದಿದ್ದು, ದಂಡ ಪಾವತಿಸುವ ಚಾಲಕರಿಗೆ ಶೇ.50ರಷ್ಟು ರಿಯಾಯಿತಿ ನೀಡಲಾಗುತ್ತಿದೆ.
ಶೇ.50ರಷ್ಟು ರಿಯಾತಿ ನೀಡಿದರೂ ಬೆಣ್ಣೆನಗರಿ ದಾವಣಗೆರೆ ಜಿಲ್ಲೆಯಲ್ಲಿ ಕೇವಲ ಮೂರು ದಿನಗಳಲ್ಲಿ 6 ಲಕ್ಷ ದಂಡ ವಸೂಲಿಯಾಗಿದೆ. ಸಂಚಾರನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬAಧಿಸಿದAತೆ ಜಿಲ್ಲೆಯಲ್ಲಿ ಮೂರು ದಿನಗಳಲ್ಲಿ ಸುಮಾರು 2400 ಸಂಚಾರಿ ಇ-ಚಲನ್ ಪ್ರಕರಣಗಳಿಗೆ ಸಂಬಧಿಸಿದAತೆ ಸುಮಾರು ಒಟ್ಟು 06 ಲಕ್ಷಕ್ಕೂ ಹೆಚ್ಚು ದಂಡವನ್ನು ಸಾರ್ವಜನಿಕರು ಪಾವತಿಸಿದ್ದಾರೆ.
ಸಂಚಾರಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯಿತಿ ಇರುವ ಹಿನ್ನೆಲೆಯಲ್ಲಿ ಜನರು ದಂಡ ಪಾವತಿಸಿದ್ದಾರೆ.
ಸಾರ್ವಜನಿಕರು ತಮ್ಮ ಸಂಚಾರಿ ನಿಯಮ ಉಲ್ಲಂಘನೆಯ ಪ್ರಕರಣಗಳಿಗೆ ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತವನ್ನು ಠಾಣೆಗಳಿಗೆ ಬಂದು ಹಾಗೂ ಆನ್ಲೈನ್ ಪೇಮೆಂಟ್ ಮೂಲಕ ಪಾವತಿಸುತ್ತಿದ್ದಾರೆ.
ಸಾರ್ವಜನಿಕರು ಸದರಿ ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ಶೇ.50% ರಿಯಾಯಿತಿಯಲ್ಲಿ ದಂಡದ ಮೊತ್ತವನ್ನು ಪಾವತಿಸುವ ಆದೇಶದ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ತಮ್ಮ ವಾಹನಗಳ ಮೇಲೆ ಇರುವ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತವನ್ನು ಹತ್ತಿರದ ದಾವಣಗೆರೆ ನಗರದ ಉತ್ತರ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಗಳಲ್ಲಿ ಮತ್ತು ನಗರದಲ್ಲಿ ವಿವಿಧ ಕಡೆ ಸ್ಥಾಪಿಸಲಾಗಿರುವ ಸಂಚಾರಿ ಇ-ಚಲನ್ ಪಾವತಿ ಸ್ಥಳಗಳಲ್ಲಿ, ಕರ್ನಾಟಕ ಒನ್ ಜಾಲತಾಣ, ದಾವಣಗೆರೆ ಒನ್ ಮೂಲಕ ಹಾಗೂ ಜಗಳೂರು, ಚನ್ನಗಿರಿ, ಹರಿಹರ, ಹೊನ್ನಾಳಿ, ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಪಾವತಿಸುವ ಮೂಲಕ ಇದರ ಸದುಪಯೋಗಪಡೆದುಕೊಳ್ಳಬಹುದಾಗಿದೆ.
English Summary: Davangere Traffic Violation Fine Collection.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ದಾವಣಗೆರೆಲೈವ್ gmail
» Whatsapp Number
95903247228