ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮಾದಾಪುರ ಕೆರೆಯಲ್ಲಿ 1,344 ವರ್ಷಗಳ ಹಿಂದಿನ ಬಾದಾಮಿ ಚಾಲುಕ್ಯರ ಅರಸ ಒಂದನೇ ವಿಕ್ರಮಾದಿತ್ಯನ ಕಾಲದ ಶಿಲಾಶಾಸನವೊಂದು ಕಂಡುಬಂದಿದೆ. ಸ್ಥಳೀಯರು ಜೆಸಿಬಿಯಿಂದ ಮಣ್ಣು ತೆಗೆಯುವ ವೇಳೆ ಈ ಶಾಸನ ಪತ್ತೆಯಾಗಿದ್ದು, ಪುರಾತತ್ವ ಇಲಾಖೆಯಿಂದ ದೃಢೀಕರಣಗೊಂಡಿದೆ.
ಕಮಲಾಪುರದ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ನಿರ್ದೇಶಕ ಡಾ.ಆರ್.ಶೇಜೇಶ್ವರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ, ಈ ಶಾಸನವು ಕ್ರಿ.ಶ. 7ನೇ ಶತಮಾನದ (ಕ್ರಿ.ಶ. 654-681) ಬಾದಾಮಿ ಚಾಲುಕ್ಯರ ಒಂದನೇ ವಿಕ್ರಮಾದಿತ್ಯನ ಕಾಲದ್ದೆಂದು ತಿಳಿಸಿದ್ದಾರೆ. 5 ಅಡಿ ಉದ್ದದ ಈ ಶಾಸನವು ಹಳೆಗನ್ನಡದ 17 ಸಾಲುಗಳನ್ನು ಹೊಂದಿದೆ.
ಶಾಸನದ ವಿವರಗಳು
ಶಾಸನದ ಪ್ರಕಾರ, ವಿಕ್ರಮಾದಿತ್ಯನ ಆಳ್ವಿಕೆಯಲ್ಲಿ ಅವನ ಅಧಿಕಾರಿ ಸಿಂಘವೆಣ್ಣನು ಬಳ್ಳಾವಿ ನಾಡನ್ನು ಆಳುತ್ತಿದ್ದನು. ಆ ಕಾಲದಲ್ಲಿ ಪ್ರಜೆಗಳಿಗಾಗಿ ಊರ ಮೇಲಿನ ಕೆಲವು ತೆರಿಗೆಗಳನ್ನು ಮನ್ನಾ ಮಾಡಲಾಗಿತ್ತು. ಅಲ್ಲದೆ, ಕೆರೆ ನಿರ್ಮಿಸಿದ ರಾಜರಿಗೆ ಆರು ಭೂಮಿಯನ್ನು ದಾನವಾಗಿ ನೀಡಲಾಗಿತ್ತು. ಈ ಭೂಮಿಯು ಬಳ್ಳಾವಿ ಎಪ್ಪತ್ತು ಒಕ್ಕಲುಗಳಿಗೆ ಸಂಬಂಧಿಸಿದೆ ಎಂದು ಶಾಸನದಲ್ಲಿ ಉಲ್ಲೇಖಿಸಲಾಗಿದೆ.
ಪ್ರಾಚೀನತೆಯ ಸಾಕ್ಷಿ
ಈ ಶಾಸನದ ಶೋಧನೆಯಿಂದ ಬಳ್ಳಾವಿ ಎಪ್ಪತ್ತು ಎಂಬ 70 ಗ್ರಾಮಗಳನ್ನೊಳಗೊಂಡ ಆಡಳಿತ ವಿಭಾಗದ ಪ್ರಾಚೀನತೆ ಬೆಳಕಿಗೆ ಬಂದಿದೆ. ಶಾಸನದ ಮುಂಭಾಗ ಮತ್ತು ಹಿಂಭಾಗದಲ್ಲಿ ಕ್ರಿ.ಶ. 17ನೇ ಶತಮಾನದ ಅಪೂರ್ಣ ಉಬ್ಬು ಶಿಲ್ಪವಿದೆ ಎಂದು ಡಾ.ಶೇಜೇಶ್ವರ ತಿಳಿಸಿದ್ದಾರೆ.
ಈ ಶಾಸನವು ಚಾಲುಕ್ಯರ ಆಡಳಿತ ಮತ್ತು ಸಾಮಾಜಿಕ ರಚನೆಯ ಬಗ್ಗೆ ಮಹತ್ವದ ಮಾಹಿತಿಯನ್ನು ಒದಗಿಸುತ್ತದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ದಾವಣಗೆರೆಲೈವ್ gmail
» Whatsapp Number
95903247228