Home ದಾವಣಗೆರೆ ಈ ಬಾರಿಯ ಗಣೇಶ ಚತುರ್ಥಿಗೆ ಪಿಒಪಿ ವಿಗ್ರಹ ಬ್ಯಾನ್: ದಾವಣಗೆರೆ ಮಹಾನಗರ ಪಾಲಿಕೆಯಿಂದ ಕಟ್ಟುನಿಟ್ಟಿನ ಎಚ್ಚರಿಕೆ
ದಾವಣಗೆರೆ

ಈ ಬಾರಿಯ ಗಣೇಶ ಚತುರ್ಥಿಗೆ ಪಿಒಪಿ ವಿಗ್ರಹ ಬ್ಯಾನ್: ದಾವಣಗೆರೆ ಮಹಾನಗರ ಪಾಲಿಕೆಯಿಂದ ಕಟ್ಟುನಿಟ್ಟಿನ ಎಚ್ಚರಿಕೆ

Share
ದಾವಣಗೆರೆ
Share

ದಾವಣಗೆರೆ: ಸೆ.14 ರಂದು ಆಚರಿಸಲಿರುವ ಗಣೇಶ ಚತುರ್ಥಿ ಹಬ್ಬವನ್ನ ಜಲಮೂಲಗಳನ್ನು ಮಲಿನಗೊಳಿಸದೇ, ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಹಾನಗರಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್ ತಿಳಿಸಿದ್ದಾರೆ.

ಪ್ಲಾಸ್ಟರ್ ಆಫ್ ಪ್ಯಾರಿಸ್‍ನಿಂದ ತಯಾರಿಸಲ್ಪಟ್ಟ ಮತ್ತು ರಾಸಾಯನಿಕ ಬಣ್ಣಲೇಪಿತ ವಿಗ್ರಹಗಳನ್ನು ಪೂಜಿಸಿ ಜಲ ಮೂಲಗಳಲ್ಲಿ ವಿಸರ್ಜಿಸುವುದರಿಂದ ನೀರು ಕಲುಷಿತವಾಗಿ ಜಲಚರಗಳಿಗೆ ಪ್ರಾಣಹಾನಿಯುಂಟು ಮಾಡುವುದಲ್ಲದೇ ನಮ್ಮ ಭವಿಷ್ಯದ ಪೀಳಿಗೆಗೆ ನಾವೇ ಕಲುಷಿತ ಪರಿಸರ ನೀಡಿದಂತಾಗುತ್ತದೆ.

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now

₹10,000 ದಂಡ ಹಾಗೂ ಶಿಸ್ತುಕ್ರಮ:

ಪಿಒಪಿ ಹಾಗೂ ರಾಸಾಯನಿಕ ಬಣ್ಣದ ಗಣೇಶ ವಿಗ್ರಹಗಳನ್ನು ತಯಾರಿಸುವುದು ಅಥವಾ ಮಾರಾಟ ಮಾಡುವುದು ಕಂಡುಬಂದಲ್ಲಿ, ಅಂತಹ ವಿಗ್ರಹಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು. ಜೊತೆಗೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಜರುಗಿಸಿ ರೂ. 10,000/- ಗಳ ದಂಡ ವಿಧಿಸಲಾಗುವುದು ಎಂದು ಪಾಲಿಕೆ ಎಚ್ಚರಿಸಿದೆ.

ಸಾರ್ವಜನಿಕರು, ವಿಗ್ರಹ ತಯಾರಕರು ಮತ್ತು ಮಾರಾಟಗಾರರು ಪರಿಸರ ಕಾಳಜಿಯಿಂದ ಮಹಾನಗರ ಪಾಲಿಕೆಯೊಂದಿಗೆ ಸಂಪೂರ್ಣವಾಗಿ ಸಹಕರಿಸಬೇಕೆಂದು ಆಯುಕ್ತರು ಕೋರಿದ್ದಾರೆ.

ಆದ್ದರಿಂದ ವಿಘ್ನನಿವಾರಕನೆಂದು ಸಮುದಾಯಗಳ ಐಕ್ಯತೆ ಸಂಕೇತವಾಗಿ ಪೂಜಿಸಲ್ಪಡುವ ಗಣೇಶನ ಹಬ್ಬವನ್ನು ನಮ್ಮೆಲ್ಲರ ಹಾಗೂ ವಿವಿಧ ಜೀವರಾಶಿಗಳ ಆರೋಗ್ಯಕ್ಕೆ ಪೂರಕವಾಗಿ ಪರಿಸರ ಸ್ನೇಹಿಯಾಗಿ ಆಚರಿಸುವ ಸಲುವಾಗಿ ಜೇಡಿ ಮಣ್ಣು , ಅರಿಶಿನ, ಬೆಲ್ಲ ಹಾಗೂ ಇತರೆ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿ ಬಣ್ಣರಹಿತ, ನೈಸರ್ಗಿಕ ಬಣ್ಣ ಲೇಪಿತ ಗಣೇಶ ವಿಗ್ರಹಗಳನ್ನು ಮಾತ್ರವೇ ಉಪಯೋಗಿಸಬೇಕು. ಪ್ಲಾಸ್ಟರ್ ಆಫ್ ಪ್ಯಾರಿಸ್‍ನಿಂದ ಸಿದ್ಧಪಡಿಸಿದ ರಾಸಾಯನಿಕ ಬಣ್ಣ ಲೇಪಿತ ಗಣೇಶ ವಿಗ್ರಹಗಳನ್ನು ತಯಾರಿಸುವುದು ಅಥವಾ ಮಾರಾಟ ಮಾಡುವುದು ಕಂಡು ಬಂದಲ್ಲಿ ಅಂತಹ ಪಿಒಪಿ, ರಾಸಾಯನಿಕ ಬಣ್ಣಲೇಪಿತ ವಿಗ್ರಹಗಳನ್ನು ವಶಪಡಿಸಿಕೊಳ್ಳುವುದರೊಂದಿಗೆ ರೂ. 10,000/- ಗಳ ದಂಡ ವಿಧಿಸಿ ಕಾನೂನು ರೀತ್ಯಾ ಕ್ರಮವಹಿಸಲಾಗುವುದು.

ಪ್ರಯುಕ್ತ, ಪರಿಸರ ಸ್ನೇಹಿ ಗಣೇಶ ಆಚರಣೆಯಲ್ಲಿ ಎಲ್ಲಾ ಸಾರ್ವಜನಿಕರು, ಗಣೇಶ ವಿಗ್ರಹ ತಯಾರಕರು ಮತ್ತು ಮಾರಾಟಗಾರರು ಮಹಾನಗರ ಪಾಲಿಕೆಯೊಂದಿಗೆ ಸಹಕರಿಸಬೇಕೆಂದು ತಿಳಿಸಿದ್ದಾರೆ.

 

Share

Leave a comment

Leave a Reply

Your email address will not be published. Required fields are marked *

Related Articles

‘ಬಳ್ಳಾರಿ ಚಲೋ’ 4ನೇ ದಿನದ ಪಾದಯಾತ್ರೆಗೆ ದಾವಣಗೆರೆ ದಕ್ಷಿಣದಿಂದ ಬಿಜೆಪಿ ಮುಖಂಡರು, ಕಾರ್ಯಕರ್ತರು

ದಾವಣಗೆರೆ: ಕಾಂಗ್ರೆಸ್‌ ಸರ್ಕಾರದ ಸಾಲು ಸಾಲು ವೈಫಲ್ಯಗಳು ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ...

ಭದ್ರಾ ಜಲಾಶಯ ಭರ್ತಿಗೆ ಇನ್ನು 7.4 ಅಡಿ ಬಾಕಿ; ಸಿಇಸಿ ಸಭೆ ವಿಳಂಬಕ್ಕೆ ರೈತರು ಕೆಂಡ!

ದಾವಣಗೆರೆ: ಭದ್ರಾ ಜಲಾನಯನ ಪ್ರದೇಶ ಮತ್ತು ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿದ್ದು. ಜಲಾಶಯಕ್ಕೆ ಬರುತ್ತಿರುವ ಒಳಹರಿವಿನ...

ದಾವಣಗೆರೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ಮಂಗಳ ಗೌರಿ ಪೂಜೆ: 11 ಮುತ್ತೈದೆಯರಿಗೆ ಬಾಗೀನ ಸಮರ್ಪಣೆ

ದಾವಣಗೆರೆ: ನಗರದ ಕೆ. ಬಿ. ಬಡಾವಣೆಯಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪವಿತ್ರ ಮಂಗಳ ಗೌರಿ ಹಬ್ಬವನ್ನು...

ಗುರುದೇವರ ಪಾವನ ಸಾನ್ನಿಧ್ಯದ ಬಿಹಾರ ಮಹೋತ್ಸವ ಸಚಿವ ಕೆ.ಎಸ್. ಬಸವಂತಪ್ಪ ಭಾಗಿ: ಗಾಯನ, ಜ್ಞಾನ, ಧ್ಯಾನದ ಮೂಲಕ ಆತ್ಮಸ್ಪರ್ಶಿ ಆಧ್ಯಾತ್ಮಿಕ ಅನುಭವ!

ದಾವಣಗೆರೆ: ಬೆಂಗಳೂರು ನಗರದ ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆದ ಬಿಹಾರ ಮಹೋತ್ಸವ–2026ರ ವಿಶೇಷ...