ದಾವಣಗೆರೆ: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷನಾಗಿ ಸುದೀರ್ಘ 13 ವರ್ಷಗಳ ಕಾಲ ಸೇವೆ ಸಲ್ಲಿಸುವ ಅವಕಾಶವನ್ನು ನನಗೆ ನೀಡಿದ ಹಾಗೂ ಈ ಅವಧಿಯುದ್ದಕ್ಕೂ ಪಕ್ಷದ ಸಂಘಟನೆಗಾಗಿ ನನಗೆ ನಿರಂತರ ಬೆಂಬಲ, ಮತ್ತು, ಸಹಕಾರ ನೀಡಿದ್ದಕ್ಕೆ ನಿಕಟಪೂರ್ವ ಜಿಲ್ಲಾಧ್ಯಕ್ಷ, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್. ಬಿ. ಮಂಜಪ್ಪ ಧನ್ಯವಾದ ಅರ್ಪಿಸಿದ್ದಾರೆ.
ಸುದೀರ್ಘ ಪತ್ರ ಬರೆದಿರುವ ಅವರು ದಾವಣಗೆರೆ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ನನ್ನ ಪ್ರೀತಿಯ ಪಕ್ಷದ ಕಾರ್ಯಕರ್ತ ಬಂಧುಗಳು, ಪಕ್ಷದ ಹಿರಿಯ ಹಾಗೂ ಕಿರಿಯ ಮುಖಂಡರುಗಳೆ, ಪಕ್ಷದ ಎಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರು ಹಾಗೂ
ಪದಾಧಿಕಾರಿಗಳೇ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಎಲ್ಲಾ ಪದಾಧಿಕಾರಿಗಳೇ ಹಾಗೂ ನನ್ನೆಲ್ಲ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಗೌರವಾನ್ವಿತ ಅಧ್ಯಕ್ಷರುಗಳೆ, ನಿಮಗೆಲ್ಲರಿಗೂ ನನ್ನ ಹೃದಯಪೂರ್ವಕ ಧನ್ಯವಾದಗಳು ಹಾಗೂ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ದಾವಣಗೆರೆ ಲೈವ್ WhatsApp Group
ಜಾಯಿನ್ ಆಗಿ
ಈ ಸಂದರ್ಭದಲ್ಲಿ ನನ್ನ ರಾಜಕೀಯ ಗುರುಗಳಾದ, ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ರವರಿಗೆ ನನ್ನ ಹೃದಯಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಹಾಗೆಯೇ, ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಹಾಲಿ ಹಾಗೂ ಮಾಜಿ ಶಾಸಕರಿಗೆ, ಹಾಲಿ ಹಾಗೂ ಮಾಜಿ ಚುನಾಯಿತ ಜನಪ್ರತಿನಿಧಿಗಳಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದಿದ್ದಾರೆ.
ನನಗೆ ಸದಾ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ನೀಡಿದ ನನ್ನ ಮಾರ್ಗದರ್ಶಕರಾದ, ಮಾಜಿ ಸಚಿವರು ಹಾಗೂ ದಾವಣಗೆರೆಯ ಧಣಿಗಳಾಗಿ, ಜಿಲ್ಲೆಯ ಹಿರಿಯ ನಾಯಕರಾಗಿದ್ದ ದಿವಂಗತ ಡಾ. ಶಾಮನೂರು ಶಿವಶಂಕರಪ್ಪ ಅವರನ್ನು ಈ ಸಂದರ್ಭದಲ್ಲಿ ಅತ್ಯಂತ ಗೌರವ ಮತ್ತು ಕೃತಜ್ಞತೆಯಿಂದ ಸ್ಮರಿಸುತ್ತೇನೆ ಎಂದು ಹೇಳಿದ್ದಾರೆ.
ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಅಧ್ಯಕ್ಷಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ ನನ್ನ ಹೃದಯಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ., ನನ್ನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಅವಧಿಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಮಾರ್ಗದರ್ಶನ ನೀಡಿದ ಅಂದಿನ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಹಾಗೂದಿನೇಶ್ ಗುಂಡೂರಾವ್ ಅವರಿಗೆ, ಹಾಗೆಯೇ ಅಂದಿನ ಕೆಪಿಸಿಸಿ ಅಧ್ಯಕ್ಷರು ಹಾಗೂ ಪ್ರಸ್ತುತ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿ. ಕೆ. ಹರಿಪ್ರಸಾದ್ ಅವರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು ಹಾಗೂ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
ಜಿಲ್ಲೆಯ ಪಕ್ಷದ ಸಂಘಟನೆಗೆ ಸಂಪೂರ್ಣ ಸಹಕಾರ, ಮಾರ್ಗದರ್ಶನ ಹಾಗೂ ಪ್ರೋತ್ಸಾಹ ನೀಡಿದ ಕರ್ನಾಟಕ ಕಂಡ ಧೀಮಂತ ನಾಯಕರು, ರಾಜ್ಯದ ಅಭಿವೃದ್ಧಿಯ ಹರಿಕಾರರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನನ್ನ ವಿಶೇಷ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಹಾಗೆಯೇ, ಪಕ್ಷದ ಎಲ್ಲಾ ಹಿರಿಯ ನಾಯಕರು, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಉಸ್ತುವಾರಿಗಳಾದ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಕೆ.ಸಿ. ವೇಣುಗೋಪಾಲ್, ದಾವಣಗೆರೆ ಜಿಲ್ಲೆಯ ಎಲ್ಲಾ ನಾಯಕರಿಗೆ ನನ್ನ ಹೃದಯಪೂರ್ವಕ ಧನ್ಯವಾದಗಳನ್ನ ಅರ್ಪಿಸುತ್ತೇನೆ ಎಂದಿದ್ದಾರೆ.
ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷನಾಗಿ ಸುದೀರ್ಘ 13 ವರ್ಷಗಳ ಕಾಲ ಸೇವೆ ಸಲ್ಲಿಸುವ ಸಂದರ್ಭದಲ್ಲಿ ನನಗೆ ದೊರೆತ ಪ್ರೀತಿ, ವಿಶ್ವಾಸ, ಸಹಕಾರ, ಬೆಂಬಲ ಹಾಗೂ ಮಾರ್ಗದರ್ಶನವನ್ನು ನಾನು ಜೀವನಪರ್ಯಂತ ಮರೆಯುವುದಿಲ್ಲ. ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರ ಪ್ರೀತಿ, ವಿಶ್ವಾಸ ಮತ್ತು ನಿಷ್ಠೆಯೇ ನನ್ನ ರಾಜಕೀಯ ಜೀವನದ ಶಕ್ತಿ ಹಾಗೂ ಪ್ರೇರಣೆಯಾಗಿದೆ. ನಿಮ್ಮೆಲ್ಲರ ಸಹಕಾರದಿಂದ ಕಳೆದ 13 ವರ್ಷಗಳ ಅವಧಿಯಲ್ಲಿ ಪಕ್ಷದ ಸಂಘಟನೆಗಾಗಿ ಪ್ರಾಮಾಣಿಕವಾಗಿ ದುಡಿಯಲು ಸಾಧ್ಯವಾಗಿದೆ. ಮುಂದೆಯೂ ಪಕ್ಷದ ಸಂಘಟನೆ, ಬಲವರ್ಧನೆ ಹಾಗೂ ಜನಸೇವೆಯ ಕಾರ್ಯಗಳಲ್ಲಿ ನಿಮ್ಮೆಲ್ಲರ ಪ್ರೀತಿ, ವಿಶ್ವಾಸ, ಮಾರ್ಗದರ್ಶನ ಮತ್ತು ಸಹಕಾರ ಸದಾ ನನ್ನೊಂದಿಗೆ ಇರಲಿ ಎಂದು ಹೃದಯಪೂರ್ವಕವಾಗಿ ಕೋರುತ್ತೇನೆ ಎಂದು ಹೆಚ್. ಬಿ. ಮಂಜಪ್ಪ ತಿಳಿಸಿದ್ದಾರೆ.
Leave a comment