DAVANAGERE NEWS TODAY | KANNADA NEWS | 07-02-2023
ಆರ್.ಚಂದ್ರಶೇಖರ್ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮೂವರು ಅಧಿಕಾರಗಳ ವಿರುದ್ಧ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿದೆ. ಶಾಸಕ ಎಂ.ಪಿ. ರೇಣುಕಾಚಾರ್ಯ ಸಹೋದರರ ಪುತ್ರ ಆರ್. ಚಂದ್ರಶೇಖರ್ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಮೂವರೂ ಅಧಿಕಾರಿಗಳು ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಭ್ರಷ್ಟಾಚಾರ ವಿರೋಧಿ ವೇದಿಕೆ ಸಂಘಟನಾ ಕಾರ್ಯದರ್ಶಿ ಹನುಮಂತಪ್ಪ ಸೊರಟೂರು ದೂರಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಭ್ರಷ್ಟಾಚಾರ ವಿರೋಧಿ ವೇದಿಕೆ ಸಂಘಟನಾ ಕಾರ್ಯದರ್ಶಿ ಹನುಮಂತಪ್ಪ ಸೊರಟೂರು ಸರ್ಕಾರಿ ಕರ್ತವ್ಯದ ಅವಧಿಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಹೊನ್ನಾಳಿ ತಾಪಂ ಇಒ ರಾಮ ಭೋವಿ, ಹಿಂದಿದ್ದ ತಹಸೀಲ್ದಾರ್ ರಶ್ಮಿ ಭಾಗವಹಿಸಿ ನಿಮಯ ಉಲ್ಲಂಘಿಸಿದ್ದಾರೆ. ಆದ್ದರಿಂದ ಮೂವರು ಉನ್ನತ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿರುವುದಾಗಿ ಹೇಳಿದ್ದಾರೆ.
2022ರ ಡಿ.16ರಂದು ಈ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ನ್ಯಾಯಮೂರ್ತಿ ಪಾಟೀಲ್ ಅವರಿಗೆ ದಾಖಲೆ ಸಹಿತ ದೂರು ನೀಡಲಾಗಿದೆ. ಮಾಹಿತಿ ಹಕ್ಕು ಕಾಯ್ದೆ ಅಡಿ ಅಧಿಕಾರಿಗಳಿಂದ ಮಾಹಿತಿ ಪಡೆದು ದೂರು ನೀಡಲು ತಡವಾಗಿದೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.