ದಾವಣಗೆರೆ: ನಲ್ಕುಂದ ಗ್ರಾಮದಲ್ಲಿ ಸಂತೋಷ್ ಕುಮಾರ್ ಅವರ ಸಹಕಾರದೊಂದಿಗೆ ಪ್ರೀತಿ ಆರೈಕೆ ಟ್ರಸ್ಟ್ ಹಾಗೂ ಆರೈಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ದಾವಣಗೆರೆಯ ಆರೈಕೆ ಆಸ್ಪತ್ರೆ ಮುಖ್ಯಸ್ಥರಾದ ಡಾ. ಟಿ. ಜಿ. ರವಿಕುಮಾರ್ ಅವರು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿಯೂ ಸಕ್ಕರೆ ಕಾಯಿಲೆ, ರಕ್ತದೊತ್ತಡ, ಹೃದ್ರೋಗ ಹಾಗೂ ಹೃದಯಾಘಾತದಂತಹ ಕಾಯಿಲೆಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದರು.
ದಾವಣಗೆರೆ ಲೈವ್ WhatsApp Group
ಜಾಯಿನ್ ಆಗಿ
ಗ್ರಾಮೀಣ ಭಾಗದ ಜನರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ, ಯಾವುದೇ ಲಕ್ಷಣಗಳು ಕಾಣಿಸಿಕೊಳ್ಳುವ ಮುನ್ನವೇ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಆರಂಭಿಕ ಹಂತದಲ್ಲೇ ಕಾಯಿಲೆಗಳನ್ನು ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆದರೆ ಗಂಭೀರ ಆರೋಗ್ಯ ಸಮಸ್ಯೆಗಳನ್ನು ತಪ್ಪಿಸಿಕೊಳ್ಳಬಹುದು ಎಂದು ಅವರು ತಿಳಿಸಿದರು.
ಈ ಉಚಿತ ಆರೋಗ್ಯ ಶಿಬಿರದಲ್ಲಿ ವಿವಿಧ ಕಾಯಿಲೆಗಳ ತಪಾಸಣೆ, ತಜ್ಞ ವೈದ್ಯರ ಸಲಹೆ ಹಾಗೂ ಅಗತ್ಯ ಚಿಕಿತ್ಸಾ ಸೇವೆಗಳನ್ನು ಒದಗಿಸಲಾಗುತ್ತಿದೆ. ಆರೋಗ್ಯವಂತರೂ ಸಹ ಮುನ್ನೆಚ್ಚರಿಕೆಯ ಕ್ರಮವಾಗಿ ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಭವಿಷ್ಯದಲ್ಲಿ ಉಂಟಾಗಬಹುದಾದ ತೀವ್ರ ಆರೋಗ್ಯ ಸಮಸ್ಯೆಗಳನ್ನು ತಡೆಯಲು ಸಾಧ್ಯ ಎಂದು ಅವರು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಲ್ಕುಂದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕಿರಣ್ ಅವರು ವಹಿಸಿದ್ದರು. ಗ್ರಾಮದ ಮುಖಂಡರಾದ ಸಂತೋಷ್ ಕುಮಾರ್, ಓಂಕಾರಪ್ಪ ಮತ್ತು ಅಣಬೇರು ನಂದಕುಮಾರ್ ಹಾಗೂ ಮಹೇಶ್ವರಪ್ಪ, ಗ್ರಾಮದ ಹಿರಿಯರು ಉಪಸ್ಥಿತರಿದ್ದರು.
- Aaraike Super Speciality Hospital
- Davangere local news
- Davangere News
- Dr TG Ravikumar
- health awareness
- Nalkunda free health camp
- Preethi Aaraike Trust
- rural health checkup camp
- ಆರೈಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ
- ಉಚಿತ ಆರೋಗ್ಯ ಶಿಬಿರ
- ಗ್ರಾಮೀಣ ಆರೋಗ್ಯ ತಪಾಸಣೆ
- ಡಾ. ಟಿ. ಜಿ. ರವಿಕುಮಾರ್
- ದಾವಣಗೆರೆ
- ದಾವಣಗೆರೆ ಸುದ್ದಿ
- ನಲ್ಕುಂದ
- ಪ್ರೀತಿ ಆರೈಕೆ ಟ್ರಸ್ಟ್
Leave a comment