ಮಾಯಕೊಂಡ : ಮಾಯಕೊಂಡದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸವಿತಾಬಾಯಿ ಮಲ್ಲೇಶ್ ನಾಯ್ಕ್ ಈಗ ಮನೆ-ಮನೆಗೆ ನಿಮ್ಮ ಮನೆಮಗಳು ಕಾರ್ಯಕ್ರಮವನ್ನು ಗುರುವಾರ ಹಮ್ಮಿಕೊಂಡಿದ್ದರು.
ಮಾಯಕೊಂಡ ಕ್ಷೇತ್ರದ ಕಂಸಾಗರ , ಪುಣ್ಯಸ್ಥಳ, ಹೊಸಳ್ಳಿ , ಚಿಕ್ಕ ಕುರುಬರಹಳ್ಳಿ ಹಾಗೂ ರೆಡ್ಡಿ ಹಳ್ಳಿಗಳಿಗೆ ಭೇಟಿ ನೀಡಿ ಕಾಂಗ್ರೆಸ್ ಸಾಧನೆಗಳ ಬಗ್ಗೆ ಪ್ರಚಾರ ನಡೆಸಿದರು.
ಈ ಸಂದರ್ಭದಲ್ಲಿ ಊರಿನ ಹಿರಿಯರು ಮುಖಂಡರು ಹಾಗೂ ಕಾಂಗ್ರೆಸ್ ನ ಕಾರ್ಯಕರ್ತರು ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷರು ಸದಸ್ಯರು ಇದ್ದರು. ಅಲ್ಲದೇ ನಾನಾ ಊರಿನಲ್ಲಿರುವ ಮಹಿಳೆಯರನ್ನು ಭೇಟಿ ಮಾಡಿ ಪಕ್ಷದ ಸಂಘಟನೆ ಹಾಗೂ ಮುಂಬರುವ ವಿಧಾನಸಭಾ ಚುನಾವಣೆಯ ಕುರಿತು ಕಾಂಗ್ರೆಸ್ ಪರ ಮಾತುಕತೆ ನಡೆಸಿದರು. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸುವಂತೆ ಮನವಿ ಮಾಡಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ದಾವಣಗೆರೆಲೈವ್ gmail
» Whatsapp Number
95903247228