ದಾವಣಗೆರೆ: ಕಾಗ್ರೇಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ಬಿ. ಎಚ್. ವೀರಭದ್ರಪ್ಪ ಅವರಿಗೆ ವಿಧಾನ ಪರಿಷತ್ ಸದಸ್ಯ ನೀಡಬೇಕು ಎಂದು ಆಗ್ರಹಿಸಿ ಮಾದಿಗ ಸಮುದಾಯದ ಮುಖಂಡರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ನಗರದ ಡಾ. ಬಿ. ಆರ್. ಅಂಬೇಡ್ಕರ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿ ಸಂಸದರು ಹಾಗೂ ಸಚಿವರಿಗೆ ಮನವಿ ಸಲ್ಲಿಸಿದರು.
ನಗರದ ಡಾ. ಬಿ. ಆರ್. ಅಂಬೇಡ್ಕರ್ ಸರ್ಕಲ್ ನಲ್ಲಿ ಭಾನುವಾರ ಕೆಲವೊತ್ತು ಪ್ರತಿಭಟನೆ ನಡೆಸಿ ಮುಖಂಡರು ನಂತರ ಬಿ. ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು ನಂತರ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಬಳಿ ತೆರಳಿ ಮನವಿ ಸಲ್ಲಿಸಿದರು.
ಕಾಂಗ್ರೆಸ್ ಪಕ್ಷದಲ್ಲಿನಾಲ್ಕು ದಶಕಗಳಿಂದ ಸೇವೆ ಮಾಡಿಕೊಂಡು ಬರುತ್ತಿರುವ ಬಿ.ಎಚ್. ವೀರಭದ್ರಪ್ಪ ಅವರನ್ನು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನೇಮಕ ಮಾಡಬೇಕೆಂದು ಮಾದಿಗ ಸಮುದಾಯದ ಮುಖಂಡರುಗಳು ಹಾಗೂ ಸಮಾಜ ಸಂಸದರ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ಈ ಕರಿತು ಪಕ್ಷದ ವರಿಷ್ಠರ ಗಮನಕ್ಕೆ ತರಲಾಗುವುದು ಎಂದು ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಭರವಸೆ ನೀಡಿದರು.
ದಾವಣಗೆರೆ ಜಿಲ್ಲೆಯಲ್ಲಿ ಹೆಚ್ಚಿದ ಅಪರಾಧ ಪ್ರಕರಣ: ಈಗ ಮತ್ತೆ 15.35 ಲಕ್ಷ ಮೌಲ್ಯದ ಚಿನ್ನಾಭರಣ ಕಳವು !
Leave a comment