DAVANAGERE TODAY NEWS | KANNADA NEWS | 13-02-2023
Honnali: ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದ ಹೊರವಲಯದಲ್ಲಿರುವ ಸಂತ ಸೇವಾಲಾಲರ ಜನ್ಮಸ್ಥಳ ಭಾಯಗಡ್ ಕ್ಷೇತ್ರದಲ್ಲಿ ಫೆ.13 ರಿಂದ 15 ರವರೆಗೆ ಸಂತ ಶ್ರೀ ಸೇವಾಲಾಲ್‌ರ 284 ನೇ ಜಯಂತಿ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದ್ದು, ಇದಕ್ಕಾಗಿ ಸೂರಗೊಂಡನಕೊಪ್ಪ ಸಿದ್ಧಗೊಂಡಿದೆ.
ಸೇವಾಲಾಲ್ ಜಯಂತಿಗೆ ಬಸ್ ವ್ಯವಸ್ಥೆ
ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತಾಧಿಗಳು ಆಗಮಿಸಲಿದ್ದು, ದಾವಣಗೆರೆ, ಹರಿಹರ, ಶಿವಮೊಗ್ಗ, ನ್ಯಾಮತಿ, ಶಿಕಾರಿಪುರ,ಹಿರೇಕೆರೂರು, ಚನ್ನಗಿರಿ ಸೇರಿದಂತೆ ವಿವಿಧ ಭಾಗಗಳಿಂದ 40 ಬಸ್‌ಗಳನ್ನು ವಿಶೇಷವಾಗಿ ವ್ಯವಸ್ಥೆ ಮಾಡಲಾಗಿದೆ. ಚಿನ್ನಿಕಟ್ಟೆಯಿಂದ ಸೂರಗೊಂಡನಕೊಪ್ಪಕ್ಕೆ ಉಚಿತವಾಗಿ 150 ಆಟೋಗಳ ವ್ಯವಸ್ಥೆ ಮಾಡಲಾಗಿದೆ.
ಸಂತಸೇವಾಲಾಲ್ ಹಾಗೂ ಮರಿಯಮ್ಮ ದೇವಾಲಯದ ಆವರಣದಲ್ಲಿ ಲಕ್ಷಾಂತರ ಭಕ್ತರು ಉಳಿದುಕೊಳ್ಳುವುದರಿಂದ ಭಕ್ತರಿಗಾಗೀ 800 ಶೌಚಾಲಯ ಹಾಗೂ ಸ್ನಾನ ಗೃಹಗಳನ್ನು ನಿರ್ಮಿಸಲಾಗಿದೆ.
ಮೂರು ದಿನ ಬೂರಿ ಬೋಜನ ವ್ಯವಸ್ಥೆ
ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆಯುವ ಕಾರ್ಯಕ್ರಮದಲ್ಲಿ ಲಕ್ಷಾಂತರ ಭಕ್ತರಿಗಾಗೀ ಬೂರಿ ಬೋಜನ ವ್ಯವಸ್ಥೆ ಮಾಡಲಾಗಿದೆ.
ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಭಾನುವಾರ ಸೂರಗೊಂಡನಕೊಪ್ಪಕ್ಕೆ ಭೇಟಿ ನೀಡಿ, ಜನರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಫೆ.14 ರಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಹತ್ತಕ್ಕೂ ಹೆಚ್ಚು ಸಚಿವರು, ಪ್ರತಿಪಕ್ಷ ನಾಯಕರು, ಶಾಸಕರು, ಮಾಜಿ ಶಾಸಕರು ಹಾಗೂ ಸಮಾಜದ ಮುಖಂಡರು ಆಗಮಿಸುತ್ತಿದ್ದು, ಈ ಕಾರಣಕ್ಕಾಗಿ ಎರಡು ಹೆಲಿಪ್ಯಾಡ್‌ಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ತಾಂಡಾ ಅಭಿವದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ್ ನಾಯಕ್ ಮಾಹಿತಿ ನೀಡಿದರು.
ಇದನ್ನು ಓದಿ: ದಾವಣಗೆರೆ ಎಕ್ಸ್‌ಪ್ರೆಸ್ ವಿನಯ್ ಕುಮಾರ್
ಮಲೇಬೆನ್ನೂರು, ಹೊನ್ನಾಳಿ, ನ್ಯಾಮತಿ, ಸವಳಂಗದಲ್ಲಿ ರಸ್ತೆಗಳಲ್ಲಿ ಮಾಲಾಧಾರಿಗಳು ಪಾದಯಾತ್ರೆ ಬರುವಾಗ ಅವರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದರು.
ಸಭೆಯ ನಂತರ ಶಾಸಕ ಎಂ.ಪಿ.ರೇಣುಕಾಚಾರ್ಯ ಹಾಗೂ ತಾಂಡಾ ಅಭಿವದ್ದಿ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ್ ನಾಯಕ್ ಹಾಗೂ ಅಧಿಕಾರಿಗಳ ಜೊತೆ ವೇದಿಕೆ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ,ಊಟದ ಕೌಂಟರ್, ಹೆಲಿಪ್ಯಾಡ್ ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಪಂ ಉಪಕಾರ್ಯದರ್ಶಿ ಕಷ್ಣನಾಯಕ, ಹೊನ್ನಾಳಿ ಉಪವಿಭಾಗಾಧಿಕಾರಿ ಹುಲುಮನಿ ತಿಮ್ಮಣ್ಣ, ನ್ಯಾಮತಿ ತಹಶೀಲ್ದಾರ್ ಗಿರೀಶ್ ಬಾಬು, ತಾ.ಪಂ.ಇಓ ರಾಮಾಬೋವಿ, ನ್ಯಾಮತಿ ಪಿಎಸ್‌ಐ ರಾಘವೇಂದ್ರ,ಪ್ರಿಯಾ ಸೋಮಶೇಖರ್, ಸಮಾಜ ಕಲ್ಯಾಣ ಇಲಾಖೆ ವಿಸ್ತರಣಾಧೀಕಾರಿ ಉಮಾ ಇದ್ದರು.
Leave a comment