ದಾವಣಗೆರೆಲೈವ್.ಕಾಂ : ದಾವಣಗೆರೆ ತಾಲೂಕಿನ ಕುರ್ಕಿ ಗ್ರಾಮದ ಬಳಿಯ ಭದ್ರಾ ಕಾಲುವೆಯಲ್ಲಿ ಶನಿವಾರ ದುರಂತವೊಂದು ಸಂಭವಿಸಿದೆ. ಕಾಲುವೆಯಲ್ಲಿ ಮುಳುಗುತ್ತಿದ್ದ ಯುವಕನನ್ನು ರಕ್ಷಿಸಲು ಹೋದ ಇಬ್ಬರು ಯುವಕರು ಸ್ವತಃ ನೀರುಪಾಲಾಗಿದ್ದಾರೆ. ಮೃತರನ್ನು ಕೆ. ರಾಮಕೃಷ್ಣ (34) ಮತ್ತು ಹಿಮೇಶ್ (21) ಎಂದು ಗುರುತಿಸಲಾಗಿದೆ. ಇವರಿಬ್ಬರೂ ಆಂಧ್ರಪ್ರದೇಶದ ಅನಂತಪುರ ನಿವಾಸಿಗಳಾಗಿದ್ದಾರೆ.
ಕೆ. ರಾಮಕೃಷ್ಣ ತಮ್ಮ ಪತ್ನಿಯ ತವರು ಮನೆಯಾದ ದಾವಣಗೆರೆ ತಾಲೂಕಿನ ಹದಡಿ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಅಕ್ಕನ ಮಗನಾದ ಹಿಮೇಶ್ ಜೊತೆಗಿದ್ದರು. ಕಾಲುವೆಯಲ್ಲಿ ಮುಳುಗುತ್ತಿದ್ದ ಇನ್ನೊಬ್ಬ ಯುವಕನನ್ನು ರಕ್ಷಿಸಲು ಧಾವಿಸಿದ ಇವರಿಬ್ಬರೂ ದುರಂತಕ್ಕೆ ಒಳಗಾದರು.
ಘಟನೆಯ ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದ್ದು, ಹಿಮೇಶ್ ಅವರ ಶವ ಪತ್ತೆಯಾಗಿದೆ. ಆದರೆ, ಕೆ. ರಾಮಕೃಷ್ಣ ಅವರ ಶವಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.
ಈ ಘಟನೆ ಹದಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ದಾವಣಗೆರೆಲೈವ್ gmail
» Whatsapp Number
95903247228