ದಾವಣಗೆರೆ: ಬಸವನಗೌಡ ಪಾಟೀಲ್ ಯತ್ನಾಳ್ ಹಾಗೂ ನಾನು ಇಂದು ಆಕಸ್ಮಿಕವಾಗಿ ಒಂದೆಡೆ ಸೇರಿದೆವು. ನಾವು ಸ್ವಾಭಿಮಾನ ಬಿಟ್ಟು ಎಂದೂ ರಾಜಕಾರಣ ಮಾಡಿಲ್ಲ. ಬಿಜೆಪಿ ಸೇರಬೇಕು ಎಂದು ಯಾರ ಕಾಲಿಗೂ ಬಿದ್ದಿಲ್ಲ. ಬಿಜೆಪಿಯಲ್ಲಿ ಸ್ವಲ್ಪ ಗೊಂದಲಗಳಿವೆ ಒಪ್ಪುತ್ತೇನೆ, ಆದರೆ ಮುಂದಿನ ದಿನಗಳಲ್ಲಿ ಇದು ಸರಿಯಾಗುತ್ತದೆ. ಆಗ ಮತ್ತೆ ನಾವು ಬಿಜೆಪಿ ಸೇರುತ್ತೇವೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.
ದೇವರಬೆಳಕೆರೆಯಲ್ಲಿ ಶುಕ್ರವಾರ ರಾತ್ರಿ ನಡೆದ ಶ್ರೀಬಸವೇಶ್ವರರ ಉತ್ಸವ ಹಾಗೂ ಜಯಂತ್ಯುತ್ಸವದಲ್ಲಿ ಮಾತನಾಡಿದರು.
ಬಿಜೆಪಿ ಪಕ್ಷದಲ್ಲಿ ಇರುವ ಗೊಂದಲಗಳು ಮುಂದಿನ ದಿನಗಳಲ್ಲಿ ಸರಿಯಾಗುತ್ತವೆ. ನಾನು ಹಾಗೂ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತೆ ಬಿಜೆಪಿ ಸೇರುತ್ತೇವೆ ಎಂದರು.
ಅಪ್ಪನ ನಕಲಿ ಸಹಿ ಮಾಡುವ ಮಕ್ಕಳು ಈ ರಾಜ್ಯದ ಮುಖ್ಯ ಮಂತ್ರಿಯಾಗಬಾರದು
ಅಪ್ಪನ ನಕಲಿ ಸಹಿ ಮಾಡುವ ಮಕ್ಕಳು ಈ ರಾಜ್ಯದ ಮುಖ್ಯ ಮಂತ್ರಿಯಾಗಬಾರದು. ಈಗ ಕೆ.ಎಸ್.ಈಶ್ವರಪ್ಪ ಹಾಗೂ ನಾನು ಬಸವನಗೌಡ ಪಾಟೀಲ್ ಯತ್ನಾಳ್ ಕೂಡಿದ್ದೇವೆ ಅಂದರೆ ಏನು ಮಾಡಬೇಕು ಎಂದು ನಾಳೆಯೇ ಅಲ್ಲಿ ಮೀಟಿಂಗ್ ನಡೆಯುತ್ತದೆ. ಕಿತ್ತೂರು ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಅಂಬೇಡ್ಕರ್ ಹಾಗೂ ವಾಲ್ಮೀಕಿ ಸಮುದಾಯದವರು ಕೂಡಿದರೆ, ಅವರು ಏನು ಮಾಡಿದರೂ ರಾಜ್ಯದ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ ಎಂದು ಬಸವನಗೌಡ ಪಾಟೀಲ್ ಯತ್ನಾಳ್ ಪರೋಷವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಟಾಂಗ್ ನೀಡಿದರು.
ಇದನ್ನು ಓದಿ: ಇಸ್ಲಾಂ, ಲಿಂಗಾಯತ ಸಮಾನ ಧರ್ಮ ಅನ್ನುವವರು ಪರಸ್ಪರ ಮದುವೆ ಮಾಡಿಕೊಳ್ಳುತ್ತೀರಾ?
ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಶ್ರೀಬಸವಮೃತ್ಯುಂಜಯ ಸ್ವಾಮೀಜಿ, ಹೆಬ್ಬಾಳು ವಿರಕ್ತಮಠದ ಶ್ರೀಮಹಾಂತ ರುದ್ರೇಶ್ವರ ಸ್ವಾಮೀಜಿ, ದಾವಣಗೆರೆ ವಿರಕ್ತಮಠದ ಶ್ರೀಬಸವಪ್ರಭು ಸ್ವಾಮೀಜಿ, ಮಾಜಿ ಶಾಸಕ ಎಚ್‌ಎಸ್ ಶಿವಶಂಕರ್, ವಿನಯ್‌ಕುಮಾರ್, ಶಿವಕುಮಾರ್, ವೀರೇಶ್, ಕರಿಬಸಪ್ಪ, ನಾನಾ ಮಠದ ಶ್ರೀಗಳು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ದಾವಣಗೆರೆಲೈವ್ gmail
» Whatsapp Number
95903247228