Home ಕ್ರೈಂ ಸುದ್ದಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಚಿರತೆ ಅಟ್ಯಾಕ್: ಸಚಿವ ಕೆ. ಎಸ್. ಬಸವಂತಪ್ಪ ಕೊಟ್ಟ ಖಡಕ್ ಸೂಚನೆಗಳೇನು?
ಕ್ರೈಂ ಸುದ್ದಿದಾವಣಗೆರೆ

ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಚಿರತೆ ಅಟ್ಯಾಕ್: ಸಚಿವ ಕೆ. ಎಸ್. ಬಸವಂತಪ್ಪ ಕೊಟ್ಟ ಖಡಕ್ ಸೂಚನೆಗಳೇನು?

Share
ಕೆ. ಎಸ್. ಬಸವಂತಪ್ಪ
Share

ದಾವಣಗೆರೆ: ವನ್ಯಜೀವಿಗಳ ಸಂಚಾರ ಹೆಚ್ಚಿರುವ ಪ್ರಮುಖ ಹೆದ್ದಾರಿ ಹಾಗೂ ರಸ್ತೆಗಳಲ್ಲಿ ‘ವನ್ಯಜೀವಿ ಸಂಚಾರ ವಲಯ’ ಎಂಬ ಎಚ್ಚರಿಕೆ ನಾಮಫಲಕಗಳನ್ನು ಅಳವಡಿಸಬೇಕು. ವಾಹನ ಸವಾರರು ವೇಗ ಕಡಿಮೆ ಮಾಡಿಕೊಂಡು ಸಂಚರಿಸುವಂತೆ ಸೂಚಿಸುವ ಫಲಕಗಳ ಮೂಲಕ ಜಾಗೃತಿ ಮೂಡಿಸಬೇಕು ಎಂದು ಸಚಿವ ಕೆ. ಎಸ್. ಬಸವಂತಪ್ಪ  ಹೇಳಿದರು.

ಆನಗೋಡುವಿನಲ್ಲಿ ಚಿರತೆ ದಾಳಿಗೆ ತುತ್ತಾದ ಅರಣ್ಯ ಇಲಾಖೆ ಸಿಬ್ಬಂದಿ ಆರೋಗ್ಯ ವಿಚಾರಿಸಿದ ಬಳಿಕ ಅವರು ಮಾತನಾಡಿದರು.

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now

ಕಾಡಿನಲ್ಲೇ ನೀರು–ಆಹಾರ ಒದಗಿಸಲು ಸೂಚನೆ:

ಕಾಡಿನಲ್ಲಿ ನೀರು ಮತ್ತು ಆಹಾರದ ಲಭ್ಯತೆ ಕಡಿಮೆಯಾಗುತ್ತಿರುವುದರಿಂದ ವನ್ಯಜೀವಿಗಳು ನಾಡಿನತ್ತ ಬರುತ್ತಿರುವ ಸಾಧ್ಯತೆ ಇದೆ. ಹೀಗಾಗಿ ಅರಣ್ಯದ ಸೂಕ್ಷ್ಮ ವಲಯಗಳನ್ನು ಗುರುತಿಸಿ ಪ್ರಾಣಿಗಳಿಗೆ ಕಾಡಿನೊಳಗೇ ಕುಡಿಯುವ ನೀರು ಮತ್ತು ಆಹಾರ ದೊರೆಯುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸೌರ ವಿದ್ಯುತ್ ಬೇಲಿ, ಟೆಂಚ್ ಅಳವಡಿಕೆಗೆ ನಿರ್ದೇಶನ:

ವನ್ಯಜೀವಿಗಳು ಕಾಡಿನಿಂದ ನಾಡಿನತ್ತ ಬರುವುದನ್ನು ತಡೆಯಲು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಅಗತ್ಯವಿರುವ ಪ್ರದೇಶಗಳಲ್ಲಿ ಟೆಂಚ್ ಹಾಗೂ ಸೌರ ವಿದ್ಯುತ್ ಬೇಲಿ ಅಳವಡಿಸಿ ವನ್ಯಜೀವಿಗಳ ಸಂರಕ್ಷಣೆ ಹಾಗೂ ಮಾನವ–ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ನಿರ್ದೇಶನ ನೀಡಿದರು.

ಅಪಘಾತಕ್ಕೀಡಾದ ಚಿರತೆಯ ರಕ್ಷಣೆಗೆ ತೆರಳಿದ್ದ ಸಿಬ್ಬಂದಿಯ ಮೇಲೆಯೇ ಚಿರತೆ ದಾಳಿ ನಡೆಸಿರುವುದು ಅರಣ್ಯ ಪ್ರದೇಶಗಳಂಚಿನಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷದ ಗಂಭೀರತೆಯನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ.

Share

Leave a comment

Leave a Reply

Your email address will not be published. Required fields are marked *

Related Articles

ದಾವಣಗೆರೆ ನೂತನ ಸಿಇಒ ಆಗಿ ಸಾಹಿತ್ಯ ಎಂ. ಆಲದಕಟ್ಟೆ ಅಧಿಕಾರ ಸ್ವೀಕಾರ: ಅಧಿಕಾರಿಗಳಿಗೆ ಖಡಕ್ ಆಗಿ ಹೇಳಿದ್ದೇನು?

ದಾವಣಗೆರೆ: ದಾವಣಗೆರೆ ಜಿಲ್ಲಾ ಪಂಚಾಯಿತಿಯ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸಾಹಿತ್ಯ ಎಂ. ಆಲದಕಟ್ಟೆ ಅವರು ಅಧಿಕಾರ...

ಛೇ… ಸಚಿವರ ಬಾಯಲ್ಲಿ ಇಂಥ ಮಾತು ಬರೋದಾ? ಹರಿಹರ ಬಿಜೆಪಿ ಶಾಸಕ ಬಿ. ಪಿ. ಹರೀಶ್ ವಿರುದ್ಧ ಎಸ್. ಎಸ್. ಮಲ್ಲಿಕಾರ್ಜುನ್ ಆಕ್ಷೇಪಾರ್ಹ ಪದ ಬಳಸಿ ಕೆಂಡ!

ದಾವಣಗೆರೆ: ಅವನ್ಯಾವನಿಗೋ ಅಣ್ಣ ಅಂತೀಯಾ, ನಿನ್ನ ಸ್ವಂತ ಅಣ್ಣನಿಗೆ ಅಣ್ಣ ಎಂದು ಹೇಳುತ್ತೀಯಾ. ಹೋಗು ಹೋಗು...

ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಇ – ಸ್ವತ್ತು ತಿದ್ದುಪಡಿಗೆ ಖಾತೆದಾರರ ಅಲೆದಾಟ ತಪ್ಪಿಸಿ: ಎಂ. ಜಿ. ಶ್ರೀಕಾಂತ್ ಒತ್ತಾಯ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಇ-ಸ್ವತ್ತು ತಿದ್ದುಪಡಿಗೆ ಖಾತೆದಾರರು ಅಲೆದಾಡುತ್ತಿದ್ದು, ಈ ಬಗ್ಗೆ ಅಧಿಕಾರಿಗಳು ಕ್ರಮ...

ದಾವಣಗೆರೆ ಜನತೆಗೆ ಶಾಕ್: ಸೆಪ್ಟೆಂಬರ್ 9 ಮತ್ತು 10ರಂದು ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ!

ದಾವಣಗೆರೆ: ದಾವಣಗೆರೆ ನಗರಕ್ಕೆ ಕುಡಿಯುವ ನೀರಿನ ಸರಬರಾಜಿನಲ್ಲಿ ಎರಡು ದಿನಗಳ ಕಾಲ ವ್ಯತ್ಯಯ ಉಂಟಾಗಲಿದೆ.  60+40ಎಂ.ಎಲ್.ಡಿ...

ಫಾಲೋ
ಮಾಡಿ